Saturday, September 26, 2026

BDA Apartments

ಕಾರುಗಳ ನಡುವೆ ಭೀಕರ ಅಪಘಾತ: ಐವರು ಸಾವು BDA JK_Adv BDA Adv
Home Crime ಕಾರುಗಳ ನಡುವೆ ಭೀಕರ ಅಪಘಾತ: ಐವರು ಸಾವು.

ಕಾರುಗಳ ನಡುವೆ ಭೀಕರ ಅಪಘಾತ: ಐವರು ಸಾವು.

ನಾಗಮಂಗಲ,ಡಿಸೆಂಬರ್,12,2022(www.justkannada.in):  ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಿಟ್ಟನಹೊಸಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ ಘಟನೆಯಲ್ಲಿ ಶ್ರೀನಿವಾಸ್ ಮೂರ್ತಿ ಜಯಂತಿ ಹಾಗೂ ಪ್ರಭಾಕರ್ ಕಿಶೋರ್  ಸೇರಿ ಐವರು ಸಾವನ್ನಪ್ಪಿದ್ದು ಐವರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ. ಕಾರುಗಳ ನಡುವೆ ಭೀಕರ ಅಪಘಾತ accident

ಬೆಂಗಳೂರಿನಿಂದ ಬರುತ್ತಿದ್ದ ಇನ್ನೋವಾ ಕಾರು ಹಾಸನದಿಂದ ಬರುತ್ತಿದ್ದ ಶಿಫ್ಟ್ ಕಾರಿನ ನಡುವೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಈ ಕುರಿತು ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: terrible -accident –between- cars-Five- died.