Saturday, September 26, 2026

BDA Apartments

ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶ ಮಾಡುವಂತೆ ಮರಾಠಿ ಸಾಹಿತ್ಯ ಸಮ್ಮೇಳನದಲ...
Home Front Page ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶ ಮಾಡುವಂತೆ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಆಗ್ರಹ.

ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶ ಮಾಡುವಂತೆ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಆಗ್ರಹ.

ಬೆಳಗಾವಿ,ಡಿಸೆಂಬರ್,12,2022(www.justkannada.in): ಗಡಿವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಕ್ಯಾತೆ ತೆಗೆಯುತ್ತಲೇ ಇದ್ದು, ಎಂಇಎಸ್ ಪುಂಡಾಟ ಮುಂದುವರೆದಿದೆ. ಈ ಮಧ್ಯೆ ಇದೀಗ ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶ ಮಾಡುವಂತೆ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಆಗ್ರಹ ಕೇಳಿ ಬಂದಿದೆ.

ತಾಲೂಕಿನ ಬೆಳಗುಂದಿಯಲ್ಲಿ ರವಳನಾಥ ಪಂಚಕ್ರೋಶಿ ಸಾಹಿತ್ಯ ಅಕಾಡೆಮಿ ವತಿಯಿಂದ ಮರಾಠಿ ಸಾಹಿತ್ಯ ಸಮ್ಮೇಳನ ನಡೆಸಿದ್ದು, ಈ ಸಮ್ಮೇಳನದಲ್ಲಿ  ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶ ಮಾಡಿ ಎಂದು ನಾಡದ್ರೋಹಿ ನಿರ್ಣಯ ಅಂಗೀಕಾರ ಮಾಡಿದ್ದಾರೆ.ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶ ಮಾಡುವಂತೆ ಮರಾಠಿ ಸಾಹಿತ್ಯ ಸಮ್ಮೇಳನದಲ...

ಇನ್ನು ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ್ದ ಎಂಇಎಸ್ ಮುಖಂಡ ಶಿವಾಜಿ ಸುಂಟಕರ್ , ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಇತ್ಯರ್ಥವಾಗುವವರೆಗೂ ಗಡಿಭಾಗವನ್ನ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲಿ .ಇಲ್ಲವೇ ಗಡಿಭಾಗದಲ್ಲಿ ಮರಾಠಿ ಭಾಷಿಕರಿಗೆ ಮರಾಠಿ ಭಾಷೆಯಲ್ಲಿ ಸರ್ಕಾರಿ ದಾಖಲಾತಿ ನೀಡಲಿ. ಈ ಕುರಿತು ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಿ ಎಂದು ಹೇಳಿದ್ದಾರೆ.

ಇನ್ನು ಮರಾಠಿ ಸಾಹಿತ್ಯ ಸಮ್ಮೇಳನದ ನಿರ್ಣಯಕ್ಕೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಎಂಇಎಸ್ ಪುಂಡರ ವಿರುದ್ದ, ಸಮ್ಮೇಳನದ  ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳುವಂತೆ  ಆಗ್ರಹಿಸಿದ್ದಾರೆ.

Key words: Demand – Marathi Sahitya Sammelana – Belgaum -Union -Territory.