Sunday, September 6, 2026

BDA Apartments

Home Front Page ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ  ಪಿ.ಎಸ್ ವಸ್ತ್ರದ್ ನೇಮಕ.

ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ  ಪಿ.ಎಸ್ ವಸ್ತ್ರದ್ ನೇಮಕ.

ಚಿತ್ರದುರ್ಗ,ಡಿಸೆಂಬರ್,13,2022(www.justkannada.in):  ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರನ್ನ ನೇಮಕ ಮಾಡಲಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರನ್ನ   ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಉಪಕಾರ್ಯದರ್ಶಿ ಟಿಸಿ ಕಾಂತರಾಜ್ ಆದೇಶ ಹೊರಡಿಸಿದ್ದಾರೆ.

ಮುರುಘ ಮಠದ ಲೆಕ್ಕಪತ್ರ,  ಹಣಕಾಸು ನಿರ್ವಹಣೆ ಮುರುಘ ಮಠದ ಚರ, ಸ್ಥಿರಾಸ್ತಿ, ಟ್ರಸ್ಟ್ , ಶಿಕ್ಷಣ ಸಂಸ್ಥೆ ಜವಾಬ್ದಾರಿ ಹಣಕಾಸು ದುರುಪಯೋಗ ತಡೆಯಲು ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ.

ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ  ಮುರುಘಾ ಶ್ರೀ ಕಳೆದ  3 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ ಆಡಳಿತಾಧಿಕಾರಿಯನ್ನ ನೇಮಕ ಮಾಡಲಾಗಿದೆ.

Key words: Retired IAS officer -PS Vastrad -appointed -administrator – Muruga Math.