Friday, September 11, 2026

BDA Apartments

Home Cinema ಸ್ಯಾಂಡಲ್ ವುಡ್ ನಟಿ ಅಭಿನಯಾಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ.  

ಸ್ಯಾಂಡಲ್ ವುಡ್ ನಟಿ ಅಭಿನಯಾಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ.  

ಬೆಂಗಳೂರು,ಡಿಸೆಂಬರ್,14,2022(www.justkannada.in):  ಪೋಷಕರ ಜತೆ ಸೇರಿ ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ‘ಅನುಭವʼ ಚಿತ್ರದ ಖ್ಯಾತಿಯ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್‌ ಆದೇಶಿಸಿದೆ.

ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ, ಕಿರುಕುಳ ನೀಡಿದ ಆರೋಪದಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿ ಜೈಲು  ಶಿಕ್ಷೆ ಪ್ರಕಟಿಸಿದೆ. ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ.

2002ರಲ್ಲಿ ಅಭಿನಯ ಅತ್ತಿಗೆ ಲಕ್ಷ್ಮೀದೇವಿ  ಅವರು ಅಭಿನಯಾ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರನ್ನು ಲಕ್ಷ್ಮೀದೇವಿ ಮದುವೆಯಾಗಿದ್ದರು. ಮದುವೆ ವೇಳೆ  ಹಾಗೂ ನಂತರ ನಟಿ ಅಭಿನಯ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ್ದರು.

ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ 2002 ರಲ್ಲಿ ಚಂದ್ರಾಲೇಔಟ್ ಠಾಣೆಗೆ ಲಕ್ಷ್ಮೀದೇವಿ ದೂರು ದಾಖಲಿಸಿದ್ದರು. ಇದೀಗ ಹೈಕೋರ್ಟ್ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ.

ಎ1 ಶ್ರೀನಿವಾಸ್  ನಟಿ ಅಭಿನಯ ಅವರ ತಾಯಿಗೆ ಜಯಮ್ಮಗೆ 5 ವರ್ಷ ಕಾರಾಗೃಹ ಶಿಕ್ಷೆ, ಎ4 ಚೆಲುವರಾಜ್, ಎ-5 ಅಭಿನಯಾಗೆ 2 ವರ್ಷ ಜೈಲು ಹಾಗೂ ದಂಡ ವಿಧಿಸಲಾಗಿದೆ.

Key words: Sandalwood- actress -Abhinaya -sentenced – 2 years – jail.