Sunday, August 23, 2026

BDA Apartments

Home Front Page ತ್ರಿಪುರಾ, ಮೇಘಾಲಯ ಚುನಾವಣೆಯತ್ತ ಪ್ರಧಾನಿ ಮೋದಿ ಚಿತ್ತ!

ತ್ರಿಪುರಾ, ಮೇಘಾಲಯ ಚುನಾವಣೆಯತ್ತ ಪ್ರಧಾನಿ ಮೋದಿ ಚಿತ್ತ!

ಬೆಂಗಳೂರು, ಡಿಸೆಂಬರ್ 18, 2022 (www.justkannada.in): ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ.

ಈ ಭಾಗದಲ್ಲಿ 6,800 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.

ಪುರಾ ಮತ್ತು ಮೇಘಾಲಯ ಎರಡರಲ್ಲೂ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಇದು ಬಿಜೆಪಿಗೆ ನಿರ್ಣಾಯಕ ಚುನಾವಣೆ ಎಂದು ಪರಿಗಣಿಸಲಾಗುತ್ತಿದೆ.

ಇತ್ತೀಚೆಗಷ್ಟೇ ಗುಜರಾತ್‌ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬಿಜೆಪಿ ಈಗ ಚುನಾವಣೆ ಎದುರಿಸಿರುವ ತ್ರಿಪುರಾ ಮತ್ತು ಮೇಘಾಲಯದತ್ತ ಗಮನ ಹರಿಸುತ್ತಿದೆ.

ಮೋದಿ ಈಶಾನ್ಯ ಕೌನ್ಸಿಲ್‌ನ ಸುವರ್ಣ ಮಹೋತ್ಸವ ಆಚರಣೆ ಮತ್ತು ಶಿಲ್ಲಾಂಗ್‌ನಲ್ಲಿ ನಡೆಯಲಿರುವ ಅದರ ಸಭೆಯಲ್ಲಿ ಭಾಗವಹಿಸಲಿದ್ದಾರೆ.