Saturday, August 15, 2026

BDA Apartments

Home Front Page ದೇಶಕ್ಕೂ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೂ ಏನು ಸಂಬಂಧ..? ಡಿ.ಕೆ ಶಿವಕುಮಾರ್ ಗೆ ಕೆ.ಎಸ್...

ದೇಶಕ್ಕೂ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೂ ಏನು ಸಂಬಂಧ..? ಡಿ.ಕೆ ಶಿವಕುಮಾರ್ ಗೆ ಕೆ.ಎಸ್ ಈಶ್ವರಪ್ಪ ತಿರುಗೇಟು.

ಬಾಗಲಕೋಟೆ,ಡಿಸೆಂಬರ್,19,2022(www.justkannada.in):  ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವೀರ ಸಾವರ್ಕರ್ ಭಾವಚಿತ್ರ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ  ವೀರ ಸಾವರ್ಕರ್​​ ಮತ್ತು ಕರ್ನಾಟಕಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಕೆ.ಎಸ್ ಈಶ್ವರಪ್ಪ, ದೇಶಕ್ಕೂ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೂ ಏನು ಸಂಬಂಧ  ಎಂದು ಮರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಯಾವ ದಿಕ್ಕಿನಲ್ಲಿ ಹೋಗುತ್ತಿದೆ? ಸೋನಿಯಾ ಗಾಂಧಿ ಜೈಲು ಶಿಕ್ಷೆ ಅನುಭವಿಸಿದ್ದಾರಾ? ರಾಹುಲ್ ಗಾಂಧಿ ಅನುಭವಿಸಿದ್ದಾರಾ? ಡಿ.ಕೆ.ಶಿವಕುಮಾರ್ ಗೆ ತಿಹಾರ್​ ಜೈಲು, ಪರಪ್ಪನ ಅಗ್ರಹಾರ ಜೈಲು ಗೊತ್ತು. ಸಾವರ್ಕರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಜೈಲು ಸೇರಿದವರು ಎಂದರು.

ವೀರ ಸಾವರ್ಕರ್ ಅವರು ಅಂಡಮಾನ್ ​ನ ಜೈಲಿನಲ್ಲಿ ಹಲವು ವರ್ಷಗಳ ಕಾಲ ಕಠಿಣ ಶಿಕ್ಷೆ ಅನುಭಿವಿಸಿದ್ದರು. ಹೀಗಾಗಿ ಕಾಂಗ್ರೆಸ್​ ನಾಯಕರು  ವೀರ ಸಾವರ್ಕರ್ ಅವರ ಇತಿಹಾಸ ತಿಳಿದುಕೊಳ್ಳುವ ಪ್ರಯತ್ನ ಮಾಡಲಿ ಎಂದು ಟಾಂಗ್ ನೀಡಿದರು.

Key words: relationship – Sonia Gandhi – Rahul Gandhi -with – country-KS Eshwarappa