Sunday, October 11, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ವಿಧಾನಸಭಾ ಚುನಾವಣೆಗೆ ಜೆಡಿಎಸ್ ನಿಂದ 92 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್.

ವಿಧಾನಸಭಾ ಚುನಾವಣೆಗೆ ಜೆಡಿಎಸ್ ನಿಂದ 92 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್.

ಬೆಂಗಳೂರು,ಡಿಸೆಂಬರ್,19,2022(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಇನ್ನ ನಾಲ್ಕೈದು ತಿಂಗಳಿನಲ್ಲಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ನ 92 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸಮ್ಮುಖದಲ್ಲಿ92 ಅಭ್ಯರ್ಥಿಗಳ ಮೊದಲ ಪಟ್ಟಿ  ಪ್ರಕಟಿಸಿದರು. ಪಟ್ಟಿಯಲ್ಲಿ ಮೈಸೂರಿನಲ್ಲಿ ಹುಣಸೂರು ಕ್ಷೇತ್ರದಲ್ಲಿ ಹರೀಶ್ ಗೌಡ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹಾಲಿ ಶಾಸಕ ಜಿ.ಟಿ ದೇವೇಗೌಡರು, ಕೆಆರ್ ನಗರ ಕ್ಷೇತ್ರಕ್ಕೆ ಹಾಲಿ ಶಾಸಕ ಸಾ.ರಾ ಮಹೇಶ್ , ಪಿರಿಯಾಪಟ್ಟಣದಲ್ಲಿ  ಕೆ.ಮಹದೇವ್, ಟಿ. ನರಸೀಪುರಕ್ಕೆ ಹಾಲಿ ಶಾಸಕ ಅಶ್ವಿನ್ ಕುಮಾರ್, ವರುಣಾ ಕ್ಷೇತ್ರಕ್ಕೆ ಅಭಿಷೇಕ್, ಕೆಆರ್ ಕ್ಷೇತ್ರಕ್ಕೆ ಮಲ್ಲೇಶ್  ಅವರನ್ನ ಅಭ್ಯರ್ಥಿಯನ್ನಾಗಿ  ಮಾಡಲಾಗಿದೆ.ವಿಧಾನಸಭಾ ಚುನಾವಣೆಗೆ ಜೆಡಿಎಸ್ ನಿಂದ 92 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ hdk

ಮಂಡ್ಯ ಜಿಲ್ಲೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರಕ್ಕೆ ಹಾಲಿ ಶಾಸಕ ರವೀಂದ್ರ ಶ್ರೀಕಂಠಯ್ಯ, ಕೆ.ಆರ್ ಪೇಟೆಗೆ ಹೆಚ್.ಟಿ ಮಂಜುನಾಥ್ ಅವರನ್ನ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. 92 ಅಭ್ಯರ್ಥಿಗಳ ಪಟ್ಟಿ ಹೀಗಿದೆ.

ವಿಧಾನಸಭಾ ಚುನಾವಣೆಗೆ ಜೆಡಿಎಸ್ ನಿಂದ 92 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ jds can...

Key words: First list – 92 candidates- released -JDS – assembly elections.