Sunday, August 23, 2026

BDA Apartments

Home Front Page ರಾಷ್ಟ್ರಾದ್ಯಂತ ವಾಜಪೇಯಿ ಸ್ಮರಣೆ: ಸ್ಮಾರಕಕ್ಕೆ ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರ ಪುಷ್ಪ ನಮನ

ರಾಷ್ಟ್ರಾದ್ಯಂತ ವಾಜಪೇಯಿ ಸ್ಮರಣೆ: ಸ್ಮಾರಕಕ್ಕೆ ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರ ಪುಷ್ಪ ನಮನ

ಬೆಂಗಳೂರು, ಡಿಸೆಂಬರ್ 25, 2022 (www.justkannada.in): ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ, ಅಜಾತಶತ್ರು ಪ್ರಧಾನಿ ಎಂದೇ ಖ್ಯಾತರಾಗಿದ್ದ ದಿವಂಗತ ಅಟಲ್ ಬಿಹಾರಿ ಅವರ 98ನೇ ಜನ್ಮದಿನ ಅಂಗವಾಗಿ ಸ್ಮಾರಕಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್, ಕೇಂದ್ರ ಸಚಿವ ಅಮಿತ್ ಶಾ, ಸಚಿವೆ ನಿರ್ಮಲಾ ಸೀತಾರಾಮನ್, ಹರ್ದೀಪ್ ಸಿಂಗ್ ಸೇರಿದಂತೆ ಹಲವು ಗಣ್ಯರು ಅಟಲ್ ಸ್ಮಾರಕಕ್ಕೆ ತಮ್ಮ ಗೌರವವನ್ನು ಸಲ್ಲಿಸಿದರು.