Saturday, September 26, 2026

BDA Apartments

ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ದೇಶದ ಜನತೆಗೆ ಹೊಸ ವರ್ಷದ ಶುಭಾಶಯ BDA JK_Adv BDA Adv
Home Front Page ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ದೇಶದ ಜನತೆಗೆ ಹೊಸ ವರ್ಷದ ಶುಭಾಶಯ

ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ದೇಶದ ಜನತೆಗೆ ಹೊಸ ವರ್ಷದ ಶುಭಾಶಯ

ಬೆಂಗಳೂರು, ಜನವರಿ 01, 2023 (www.justkannada.in): ಪ್ರಧಾನಿ ನರೇಂದ್ರ ಮೋದಿಯವರು ಕೂಡ ಹೊಸ ವರ್ಷದ ದಿನ ದೇಶದ ಜನರಿಗೆ ಒಳಿತಾಗಲಿ ಎಂದು ಹಾರೈಸಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ 2023 ಭರವಸೆ, ಸಂತೋಷ ಮತ್ತು ಬಹಳಷ್ಟು ಯಶಸ್ಸಿನಿಂದ ತುಂಬಿರಲಿ. ಪ್ರತಿಯೊಬ್ಬರಿಗೂ ಅದ್ಭುತವಾದ ಆರೋಗ್ಯವನ್ನು ದೇವರು ಆಶೀರ್ವದಿಸಲಿ ಎಂದು ಹರಿಸಿದ್ದಾರೆ. ಇದರ ಜತೆಗೆ ನಾನಾ ಕ್ಷೇತ್ರಗಳ ಗಣ್ಯರು ಕೂಡ ಹೊಸ ವರ್ಷದ ಶುಭಾಶಯ ಕೋರುತ್ತಿದ್ದಾರೆ.

ದೇಶದಾದ್ಯಂತ ಎಲ್ಲೆಡೆ ಹೊಸ ವರ್ಷಾಚರಣೆ ಜೋರಾಗಿದೆ. ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಮೈಸೂರಿನ ಚಾಮುಂಡಿಬೆಟ್ಟ ಸೇರಿದಂತೆ ಧಾರ್ಮಿಕ ಕೇಂದ್ರಗಳು ಭಕ್ತರು, ಪ್ರವಾಸಿಗರಿಂದ ತುಂಬಿ ತುಳುಕುತ್ತಿವೆ.