Tuesday, August 4, 2026

BDA Apartments

Home Front Page ಮೂರು ಕ್ಷೇತ್ರಗಳಿಗೆ ಅರ್ಜಿ ಸಲ್ಲಿಸಿದ್ದೇನೆ: ಹೈಕಮಾಂಡ್ ಹೇಳಿದ ಕಡೆ ಸ್ಪರ್ಧೆ- ಮಾಜಿ ಸಿಎಂ ಸಿದ್ಧರಾಮಯ್ಯ.

ಮೂರು ಕ್ಷೇತ್ರಗಳಿಗೆ ಅರ್ಜಿ ಸಲ್ಲಿಸಿದ್ದೇನೆ: ಹೈಕಮಾಂಡ್ ಹೇಳಿದ ಕಡೆ ಸ್ಪರ್ಧೆ- ಮಾಜಿ ಸಿಎಂ ಸಿದ್ಧರಾಮಯ್ಯ.

ಬಾಗಲಕೋಟೆ,ಜನವರಿ,6,2023(www.justkannada.in): ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದ್ದು ಈ ನಡುವೆ  ಮೂರು ಕ್ಷೇತ್ರಗಳಿಗೆ ಅರ್ಜಿ ಸಲ್ಲಿಸಿರುವುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

ಬಾದಾಮಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಬಾದಾಮಿ, ಕೋಲಾರ, ವರುಣಾ ಕ್ಷೇತ್ರಗಳಿಗೆ ಅರ್ಜಿ ಸಲ್ಲಿಕೆ  ಮಾಡಿದ್ದೇನೆ.  ಚುನಾವಣೆ ಸ್ಪರ್ಧೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ.  ಹೈಕಮಾಂಡ್ ಆದೇಶದಂತೆ ಸ್ಪರ್ಧಿಸುತ್ತೇನೆ. ಹೈಕಮಾಂಡ್ ಎಲ್ಲಿ ಹೇಳುತ್ತದೆಯೋ ಅಲ್ಲಿ ಸ್ಪರ್ಧಿಸುತ್ತೇನೆ ಎಂದರು.

ಬಾದಾಮಿಯಲ್ಲಿ, ಕೋಲಾರದಲ್ಲಿ ನಿಲ್ಲಬೇಕೆಂದು ನನಗೆ ತೀವ್ರ ಒತ್ತಡ ಇದೆ. ವರುಣಾ ಕ್ಷೇತ್ರಕ್ಕೆ ಜನ ಒತ್ತಡ ಹಾಕಿದ್ದಾರೆ. ವರುಣಾದಿಂದಲೇ ಸ್ಪರ್ಧಿಸಲು ಒತ್ತಡ ಬಂದಿದೆ. ಕೊನೆಗೆ ಎಲ್ಲಿ ಸ್ಪರ್ಧಿಸಬೇಕೆಂದು ಹೈಕಮಾಂಡ್ ತೀರ್ಮಾನಿಸುತ್ತೆ ಎಂದರು.

Key words:   applied- three- constituencies-high command – Former CM -Siddaramaiah.