Thursday, August 6, 2026

BDA Apartments

Home Front Page ಕೋಲಾರದಿಂದ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಅಧಿಕೃತ ಘೋಷಣೆ.

ಕೋಲಾರದಿಂದ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಅಧಿಕೃತ ಘೋಷಣೆ.

ಕೋಲಾರ,ಜನವರಿ,9,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ಯಾವ ಕ್ಷೇತ್ರದಿಂದ  ವಿಪಕ್ಷ ನಾಯಕ ಸಿದ್ಧರಾಮಯ್ಯ ಸ್ಪರ್ಧಿಸುತ್ತಾರೆಂಬ ಕುತೂಹಲಕ್ಕೆ ಇಂದು ಸ್ವತಃ ಅವರೇ ತೆರೆ ಎಳೆದಿದ್ದಾರೆ.

ಕೋಲಾರ ಕ್ಷೇತ್ರದಿಂದಲೇ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ಧರಾಮಯ್ಯ, ಮುಂದಿನ ವಿಧಾನಸಭಾ ಚುನಾವಣೆಗೆ  ನಾನು ಕೋಲಾರದಿಂದಲೇ ಸ್ಪರ್ಧಿಸುತ್ತೇನೆ.  ಕಾಂಗ್ರೆಸ್ ಪಕ್ಷದ ಶಿಸ್ತಿಗೆ ನಾನು ಸಿದ್ಧ ಎಲ್ಲರೂ ಸಹ ಹೈಕಮಾಂಡ್ ಹೇಳಿದಂತೆ ಕೇಳಬೇಕು.  ಕೋಲಾರ ಸರ್ವತೋಮುಖ  ಅಭಿವೃದ್ದಿಗೆ ಬದ‍್ಧ ಎಂದಿದ್ದಾರೆ.

ವರುಣಾ ಬಾದಾಮಿ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅರ್ಜಿ ಸಲ್ಲಿಸಿರುವುದಾಗಿ ಇತ್ತೀಚೆಗೆ ಸಿದ್ಧರಾಮಯ್ಯ ಹೇಳಿಕೆ ನೀಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಸಿದ್ಧರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತು ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದರು.

Key words: Official announcement -former CM -Siddaramaiah – contest – Kolar.