Sunday, September 20, 2026

BDA Apartments

Home Crime ಮುಂದುವರೆದ ಮಂಗಳೂರು ಪೊಲೀಸರ ಕಾರ್ಯಾಚರಣೆ:  ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿಯ ಬಂಧನ.

ಮುಂದುವರೆದ ಮಂಗಳೂರು ಪೊಲೀಸರ ಕಾರ್ಯಾಚರಣೆ:  ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿಯ ಬಂಧನ.

ಮಂಗಳೂರು,ಜನವರಿ,12,2023(www.justkannada.in): ಮಂಗಳೂರು ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಇಂದು ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿಯನ್ನ ಬಂಧಿಸಿದ್ದಾರೆ.

ನಿನ್ನೆ ಬೃಹತ್ ಡ್ರಗ್ಸ್ ದಂಧೆ ಭೇದಿಸಿದ್ದ ಮಂಗಳೂರು ಪೊಲೀಸರು ಇಬ್ಬರು ವೈದ್ಯರು, ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ 10 ಮಂದಿಯನ್ನ ಬಂಧಿಸಿದ್ದರು. ಡ್ರಗ್ಸ್ ಪೆಡ್ಲರ್ ನೀಲ್ ಕಿಶೋರಿ ಮಾಹಿತಿ ಮೇರೆಗೆ ಪೊಲೀಸರು ತನಿಖೆ ನಡೆಸುತ್ತಿದ್ದು ಇಂದು ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿ ವಿಎಸ್ ಹರ್ಷಕುಮಾರ್ ಎಂಬುವವನನ್ನ ಪೊಲೀಸರು ಬಂಧಿಸಿದ್ದಾರೆ.ಮುಂದುವರೆದ ಮಂಗಳೂರು ಪೊಲೀಸರ ಕಾರ್ಯಾಚರಣೆ drug arrest

ಈತ ಕೆಎಂಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಯಾಗಿದ್ದು ತುಮಕೂರು ಮೂಲದವನು ಎನ್ನಲಾಗಿದೆ. ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದೆ.

Key words: Mangalore- police -operation – Another –medical- student -arrested.