Sunday, August 2, 2026

BDA Apartments

Home Front Page 40 ವರ್ಷ ರಾಜಕೀಯ ಅನುಭವವಿರುವ ಸಿದ್ಧರಾಮ್ಯಯ ಕ್ಷೇತ್ರ ಹುಡುಕುತ್ತಿರುವುದು ದುರಂತದ ವಿಚಾರ- ಶಾಸಕ ಸಿ.ಟಿ ರವಿ

40 ವರ್ಷ ರಾಜಕೀಯ ಅನುಭವವಿರುವ ಸಿದ್ಧರಾಮ್ಯಯ ಕ್ಷೇತ್ರ ಹುಡುಕುತ್ತಿರುವುದು ದುರಂತದ ವಿಚಾರ- ಶಾಸಕ ಸಿ.ಟಿ ರವಿ

ಚಿಕ್ಕಮಗಳೂರು,ಜನವರಿ,12,2023(www.justkannada.in): ಸಿದ್ಧರಾಮಯ್ಯಗೆ 40 ವರ್ಷದ ರಾಜಕೀಯ ಅನುಭವವಿದೆ. ಈಗಲೂ ಕ್ಷೇತ್ರದ ಹುಡುಕಾಟ ನಡೆಸುತ್ತಿರುವುದು ದುರಂತದ ವಿಚಾರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಲೇವಡಿ ಮಾಡಿದರು.

ಚಿಕ್ಕಮಗಳೂರಿನಲ್ಲಿ ಇಂದು ಮಾತನಾಡಿದ ಶಾಸಕ ಸಿ.ಟಿ ರವಿ, ಸಿದ್ಧರಾಮಯ್ಯಗೆ  ಮೈಸೂರು ಭಾಗದಲ್ಲಿ ಗೆಲ್ಲುವ ವಿಶ್ವಾಸವಿಲ್ಲ.  ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ವಿಶ್ವಾಸ ಕಳೆದು ಕೊಂಡಿದ್ದಾರೆ. ಈಗ ಬಾದಾಮಿ ಕ್ಷೇತ್ರದಲ್ಲಿ 2ನೇ ಬಾರಿ ಗೆಲ್ಲುವ ವಿಶ್ವಾಸವಿಲ್ಲ. ಹೀಗಾಗಿ ಕೋಲಾರ ಕ್ಷೇತ್ರಕ್ಕೆ ಹೋಗಿದ್ದಾರೆ ಎಂದು ಟಾಂಗ್ ನೀಡಿದರು.BL Santosh - selection -candidates - Rajya Sabha-minister-CT Ravi.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವನ್ನೂ ಜನರು ನಿರ್ಧರಿಸುತ್ತಾರೆ. ಜನರ ತೀರ್ಮಾನದ ಬಗ್ಗೆ ನಾನೇನು ಹೇಳುವುದಿಲ್ಲ. ಎಂದು ಶಾಸಕ ಸಿಟಿ ರವಿ ತಿಳಿಸಿದರು.

Key words: siddaramaiah-kolar-contest-MLA-CT Ravi