Thursday, September 17, 2026

BDA Apartments

ಭಾರತ್ ಜೋಡೋ ಯಾತ್ರೆ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ನ...
Home Front Page ಭಾರತ್ ಜೋಡೋ ಯಾತ್ರೆ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ನಿಧನ

ಭಾರತ್ ಜೋಡೋ ಯಾತ್ರೆ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ನಿಧನ

ಪಂಜಾಬ್,ಜನವರಿ,14,2023(www.justkannada.in): ಭಾರತ್ ಜೋಡೋ ಯಾತ್ರೆ ವೇಳೆ ಹೃದಯಾಘಾತದಿಂದ ಜಲಂದರ್ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ನಿಧನರಾಗಿದ್ದಾರೆ.

ಪಂಜಾಬ್‌ನ ಫಿಲ್ಲೌರ್‌ನಲ್ಲಿ ಭಾರತ್ ಜೋಡೋ ಯಾತ್ರೆಯ ಸಂಸದ ಚೌಧರಿ ಸಂತೋಖ್ ಸಿಂಗ್  ಹೃದಯಾಘಾತವಾಗಿದ್ದು, ಲೂದಿಯನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಂತೋಖ್ ಸಿಂಗ್  ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಭಾರತ್ ಜೋಡೋ ಯಾತ್ರೆ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ನ...

ಸಂತೋಖ್ ಸಿಂಗ್  ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಭಾರತ್ ಜೋಡೋ ಯಾತ್ರೆ ಕಳೆದ ವರ್ಷ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು ಮತ್ತು ಜನವರಿ 30 ರಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮುಕ್ತಾಯಗೊಳ್ಳಲಿದೆ.

Key words: Congress -MP -Santokh Singh- died -heart attack -Bharat Jodo Yatra