ಬೆಂಗಳೂರು,ಜನವರಿ,17,2023(www.justkannada.in): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಿಲ್ಲ. ನೋಟಿಸ್ ಕೊಟ್ಟರೆ ಸುಮ್ಮನಿರಲ್ಲ ಎಂದು ಬಿಜೆಪಿ ನಾಯಕರಿಗೆ ಜಯಮೃತ್ಯಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.![]()
ಸರ್ಕಾರ ಮತ್ತು ತಮ್ಮ ಪಕ್ಷದವರ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘನೆ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿತ್ತು ಎಂದು ವರದಿಯಾಗಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ನೋಟಿಸ್ ನೀಡಿಲ್ಲ. ನೋಟಿಸ್ ಕೊಟ್ಟರೆ ಪಂಚಮಸಾಲಿ ಸಮುದಾಯ ಯತ್ನಾಳ್ ಪರ ನಿಲ್ಲುತ್ತೆ ರಾಜಕೀಯ ವೈರಿಗಳು ಯತ್ನಾಳ್ ವಿರುದ್ದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.
Key words: No notice– Yatnal- -Jayamruthyunjaya Swamiji’-warning.







