Wednesday, July 29, 2026

BDA Apartments

Home Front Page ಸರ್ಕಾರ ಬೆಲೆ ಏರಿಕೆ ನಿಯಂತ್ರಣ ಮಾಡಲು ಆಗಿಲ್ಲ: ಹೀಗಾಗಿ ಬಡವರಿಗೆ ಸಹಾಯ ಮಾಡಲು ತೀರ್ಮಾನ –ಡಿ.ಕೆ...

ಸರ್ಕಾರ ಬೆಲೆ ಏರಿಕೆ ನಿಯಂತ್ರಣ ಮಾಡಲು ಆಗಿಲ್ಲ: ಹೀಗಾಗಿ ಬಡವರಿಗೆ ಸಹಾಯ ಮಾಡಲು ತೀರ್ಮಾನ –ಡಿ.ಕೆ ಶಿವಕುಮಾರ್.

ಬಾಗಲಕೋಟೆ,ಜನವರಿ,18,2023(www.justkannada.in):  ಬಿಜೆಪಿ  ಸರ್ಕಾರ ಬೆಲೆ ಏರಿಕೆ ನಿಯಂತ್ರಣ ಮಾಡಲು ಆಗಿಲ್ಲ.  ಹೀಗಾಗಿ ಬಡವರಿಗೆ ಸಹಾಯ ಮಾಡಲು ತೀರ್ಮಾನ  ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಡಿ.ಕೆ ಶಿವಕುಮಾರ್,  ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಸಿದ್ಧರಾಮಯ್ಯ ಹೇಳಿದ್ದಾರೆ ಅಂತಿಮವಾಗಿ ಈ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ. ಜನರ ಸಮಸ್ಯೆ ಆಲಿಸಲು ಪ್ರಜಾಧ್ವನಿ ಸಮಾವೇಶ ಮಾಡುತ್ತೇವೆ. ನಾ ನಾಯಕಿ ಸಮಾವೇಶದಲ್ಲಿ ಜನರು ನೋವು ತೋಡಿಕೊಂಡಿದ್ದಾರೆ. ಮಹಿಳೆಯರ ನೋವು ಆಲಿಸಿ ಮಹಿಳೆಯರ ಖಾತೆಗೆ ಹಣ ಹಾಕುತ್ತೇವೆ ಪ್ರತಿ ಮಹಿಳೆಯರಿಗೆ ವರ್ಷಕ್ಕೆ 24 ಸಾವಿರ ರೂ ಹಾಕುತ್ತೇವೆ. ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ ಎಂದರು.

ಬೆಲೆ ಏರಿಕೆ ನಿಯಂತ್ರಣ ಮಾಡಲು ಆಗಿಲ್ಲ. ಹೀಗಾಗಿ ಬಡವರಿಗೆ ಸಹಾಯ ಮಾಡಲು ನಿರ್ಧಾರ ಮಾಡಿದ್ದು, ಇದೆಲ್ಲವೂ ಹೇಗೆ ಸಾಧ್ಯ ಎಂದು ನಾವು ತೋರಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Government – control -price rise- decision – poor-DK Shivakumar.