Thursday, July 30, 2026

BDA Apartments

Home Front Page ಬಂಜಾರ ಸಮುದಾಯಕ್ಕೆ ಹಕ್ಕುಪತ್ರ ವಿತರಣೆ ಮಾಡಿದ ಪ್ರಧಾನಿ ಮೋದಿ.

ಬಂಜಾರ ಸಮುದಾಯಕ್ಕೆ ಹಕ್ಕುಪತ್ರ ವಿತರಣೆ ಮಾಡಿದ ಪ್ರಧಾನಿ ಮೋದಿ.

ಕಲ್ಬುರ್ಗಿ,ಜನವರಿ,19,2023(www.justkannada.in): ಯಾದಗಿರಿ ಮತ್ತು ಕಲ್ಬುರ್ಗಿ ಜಿಲ್ಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರವಾಸ ಕೈಗೊಂಡು ಹಲವು ಯೋಜನೆಗಳಿಗೆ ಚಾಲನೆ ನೀಡಿದರು.

ಕಲ್ಬುರ್ಗಿಯ ಮಳಖೇಡ ಗ್ರಾಮದಲ್ಲಿ ಆಯೋಜಿಸಿದ್ಧ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಂಜಾರ ಸಮುದಾಯಕ್ಕೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಲಂಬಾಣಿ ತಾಂಡಾ ಜನರಿಗೆ ಹಕ್ಕುಪತ್ರ ವಿತರಣೆ ಮಾಡಿದರು.

ಈ ವೇಳೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಇಂದು ಲಂಬಾಣಿ ತಾಂಡದ 51 ಸಾವಿರಕ್ಕೂ ಹೆಚ್ಚು ಜನರಿಗೆ ಹಕ್ಕುಪತ್ರ ವಿತರಿಸಲಾಗುತ್ತಿದ್ದು ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮುಂದಿನ ತಿಂಗಳು ಉಳಿದವರಿಗೆ ವಿತರಣೆ ಮಾಡಲಾಗುವುದು ಎಂದರು.

Key words: Prime Minister -Modi -distributed -rights – Banjara community.