Friday, August 7, 2026

BDA Apartments

Home Front Page ಸಿಎಂ ಬೊಮ್ಮಾಯಿ ಭೇಟಿಯಾದ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್.

ಸಿಎಂ ಬೊಮ್ಮಾಯಿ ಭೇಟಿಯಾದ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್.

ಬೆಂಗಳೂರು,ಜನವರಿ,20,2023(www.justkannada.in): ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದಾರೆ.

ಆರ್ ಟಿ ನಗರದ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿಯಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಸರ್ಕಾರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದ ಹೆಚ್.ವಿಶ್ವನಾಥ್ ಇತ್ತೀಚೆಗೆ ಮಾಧ್ಯಮಗಳ ಜೊತೆ ಮಾತನಾಡಿ ನನ್ನ ರಕ್ತದಲ್ಲೇ ಕಾಂಗ್ರೆಸ್ ಇದೆ. ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದರು.

ಕಾಂಗ್ರೆಸ್ ಪಕ್ಷ ಸೇರ್ಪಡೆ ಹೇಳಕೆ ಕೊಟ್ಟ ಬಳಿಕ ಹೆಚ್.ವಿಶ್ವನಾಥ್ ಅವರು ಸಿಎಂ  ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.

Key words: MLC-H. Vishwanath-met – CM Bommai