Sunday, August 2, 2026

BDA Apartments

Home Front Page ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ- ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ.

ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ- ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ.

ಮಂಗಳೂರು.ಜನವರಿ,21,2023(www.justkannada.in): ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಇಂದು ಮಾತನಾಡಿದ ಡಾ.ಜಿ.ಪರಮೇಶ್ವರ್,  ಪ್ರಣಾಳಿಕೆ ಬಗ್ಗೆ ಸಂಘ ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದೇವೆ.  ಕರಾವಳಿ ಭಾಗದ ಸಮಸ್ಯೆಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದೇವೆ.  ಬಿಜೆಪಿ ಕರಾವಳಿ ಜಿಲ್ಲೆಗಳಲ್ಲಿ ಸಾಮರಸ್ಯ ಹಾಳು ಮಾಡಿದೆ. ಕೋಮು ಸೌಹಾರ್ದತೆ ಕೂಡ ನಮ್ಮ ಪ್ರಣಾಳಿಕೆಯಲ್ಲಿ ಇರಲಿದೆ ಎಂದರು.

ಬಿಜೆಪಿ ಸರ್ಕಾರ ವಿದ್ಯಾರ್ಥಿ ವೇತನವನ್ನೂ ನಿಲ್ಲಿಸಿದೆ. ಪಿಡಬ್ಲ್ಯುಡಿ ಇಲಾಖೆಯ 6.5 ಸಾವಿರ ಕೋಟಿ ಹಣ ಬಿಡುಗಡೆ ಆಗಿಲ್ಲ . ಎಸ್ ಸಿ ಮತ್ತು ಎಸ್ ಟಿ ಮೀಸಲಿಟ್ಟ ಹಣವನ್ನ ಬೇರೆ ಕಡೆ ಖರ್ಚು ಮಾಡಿದ್ದಾರೆ. ಇದೆಲ್ಲವನ್ನೂ ತಿಳಿಸಲು ಪ್ರಜಾಧ್ವನಿ ಆಯೋಜನೆ ಮಾಡಿದ್ದೇವೆ. ನಾಳೆ ಉಡುಪಿ ಮಂಗಳೂರಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ ಎಂದು ಜಿ.ಪರಮೇಶ್ವರ್ ಹೇಳಿದರು.

Key words:  separate -manifesto – Coastal -Karnataka-former DCM -Dr. G. Parameshwar.