ಬೆಂಗಳೂರು,ಜನವರಿ,23,2023(www.justkannada.in): ಸೂರ್ಯವಂಶ’, ‘ಯಜಮಾನ ಸೇರಿದಂತೆ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಲಕ್ಷ್ಮಣ್(74) ಹೃದಯಾಘಾತದಿಂದ ನಿಧನರಾಗಿದ್ದಾರೆ.![]()
ಭಾನುವಾರ ರಾತ್ರಿ ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಯಿತು. ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ . ಲಕ್ಷ್ಮಣ್ ಅವರ ನಿಧನಕ್ಕೆ ಸಿನಿಪ್ರಿಯರು ಸಂತಾಪ ಸೂಚಿಸಿದ್ದಾರೆ.
ಲಕ್ಷ್ಮಣ್ ಅವರು ಪೋಷಕ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಅನೇಕ ಸಿನಿಮಾಗಳಲ್ಲಿ ಅವರು ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದರು. ‘ಒಲವಿನ ಉಡುಗೊರೆ’, ‘ಸಾಂಗ್ಲಿಯಾನ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದರು.
Key words: Kannada actor- Laxman -passed away – heart attack.







