ಬೆಂಗಳೂರು, ಫೆಬ್ರವರಿ,3,2023 (www.justkannada.in): ರಾಜ್ಯ ಸರ್ಕಾರವು ಇ-ಚಲಾನ್ ಪ್ರಕರಣಗಳೆಂದು ಕರೆಯಲ್ಪಡುವ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಕಾರಣದಿಂದಾಗಿ ವಿಧಿಸಿರುವ ದಂಡದ ಮೊತ್ತ ಬಾಕಿ ಇರುವ ಪ್ರಕರಣಗಳಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ನಿರ್ಧರಿಸಿದೆ.![]()
ಜಸ್ಟೀಸ್ ಬಿ.ವೀರಪ್ಪ, ಕಾರ್ಯನಿರ್ವಾಹಕ ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಇವರ ಅಧ್ಯಕ್ಷತೆಯಲ್ಲಿ ಜನವರಿ 27, 2023ರಂದು ನಡೆದಂತಹ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಪ್ರಕಾರ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಒಂದು ಆದೇಶವನ್ನು ಹೊರಡಿಸಿದೆ.
ಈ ಸಂಬಂಧ ಸಾರಿಗೆ ಇಲಾಖೆಗೆ ಸಾಧ್ಯವಾದಷ್ಟು ಬೇಗ ಕ್ರಮಗಳನ್ನು ಕೈಗೊಳ್ಳುವಂತೆ ಈ ಸಭೆಯಲ್ಲಿ ನಿರ್ಧರಿಸಲಾಯಿತು ಹಾಗೂ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವುದನ್ನು ಖಾತ್ರಿಪಡಿಸಲು ಈ ಆದೇಶವನ್ನು ಪಾಲಿಸುವಂತೆ ಈ ಆದೇಶದಲ್ಲಿ ತಿಳಿಸಲಾಗಿತ್ತು.
ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್
Key words: government – 50% discount – payment -traffic fines -e-challan -cases.







