Saturday, September 19, 2026

BDA Apartments

Home Front Page ಪ್ರಹ್ಲಾದ್ ಜೋಶಿ ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ಎಂಬ ಹೆಚ್.ಡಿಕೆ ಹೇಳಿಕೆಗೆ ಸಚಿವ...

ಪ್ರಹ್ಲಾದ್ ಜೋಶಿ ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ಎಂಬ ಹೆಚ್.ಡಿಕೆ ಹೇಳಿಕೆಗೆ ಸಚಿವ ಗೋಪಾಲಯ್ಯ ಕಿಡಿ.

ಬೆಂಗಳೂರು,ಫೆಬ್ರವರಿ,6,2023(www.justkannada.in): ಪ್ರಹ್ಲಾದ್ ಜೋಶಿಯನ್ನು ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ನಡೆಸಿದೆ ಎಂದು  ಹೇಳಿಕೆ ನೀಡಿದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ  ಸಚಿವ ಗೋಪಾಲಯ್ಯ  ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಗೋಪಾಲಯ್ಯ, ಹೆಚ್.ಡಿ ಕುಮಾರಸ್ವಾಮಿ ಇಂತಹ ಹೇಳಿಕೆ ನೀಡಬಾರದು  ರಾಜ್ಯಕ್ಕೆ ಪ್ರಹ್ಲಾದ್ ಜೋಶಿ ಆನೇಕ ಕೊಡುಗೆಗಳನ್ನ ನೀಡಿದ್ದಾರೆ. ಕೇಂದ್ರ ಸಚಿವರಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ನಾವು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗತ್ತೇನೆ. ಪ್ರಧಾನಿ ಮೋದಿ ಸಿಎಂ ಬಸವರಾಜ ಬೊಮ್ಮಾಯಿ,  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ.

ನಮ್ಮ ಪಕ್ಷಕ್ಕೆ ರಾಷ್ಟ್ರ ರಾಜ್ಯ ಮಟ್ಟದಲ್ಲಿ ಸಮರ್ಥ ನಾಯಕತ್ವ ಇದೆ. ಯಾರು ಸಿಎಂ ಆಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ ಎಂದು ಸಚಿವ ಗೋಪಾಲಯ್ಯ ಟಾಂಗ್ ನೀಡಿದರು.

Key words: Minister- Gopalaiah – HD Kumaraswamy- statement