Thursday, August 27, 2026

BDA Apartments

Home Front Page ಸಿಎಂ ಹೆಚ್.ಡಿ ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯಕ್ಕೆ ಕಾರಣ ಕೊಟ್ಟ ಡಿಸಿಎಂ ಪರಮೇಶ್ವರ್…

ಸಿಎಂ ಹೆಚ್.ಡಿ ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯಕ್ಕೆ ಕಾರಣ ಕೊಟ್ಟ ಡಿಸಿಎಂ ಪರಮೇಶ್ವರ್…

ತುಮಕೂರು,ಮೇ,11,2019(www.justkannada.in):  ಸಿಎಂ ಹೆಚ್.ಡಿ ಕುಮಾರಸ್ವಾಮಿ ಚುನಾವಣಾ ಪ್ರಚಾರದ ವೇಳೆ ದಣಿದಿದ್ದಾರೆ. ಹೀಗಾಗಿ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಡಿಸಿಎಂ ಪರಮೇಶ್ವರ್ ಸ್ಪಷ್ಟನೆ ನೀಡಿದರು.

ತುಮಕೂರಿನಲ್ಲಿ ಈ ಕುರಿತು ಮಾತನಾಢಿದ ಡಿಸಿಎಂ ಪರಮೇಶ್ವರ್,  ಚುನಾವಣಾ ಪ್ರಚಾರದಿಂದ ಸಿಎಂ ಹೆಚ್.ಡಿ ಕುಮಾರಸ್ವಾಮಿ ದಣಿದಿದ್ದಾರೆ. ಈಗ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರಿ ಕೆಲಸಗಳು ಕೂಡ ಕಡಿಮೆ ಇವೆ. ಹೀಗಾಗಿ ಹೆಚ್.ಡಿ ಕುಮಾರಸ್ವಾಮಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರು ಆರೋಗ್ಯವಾಗಿದ್ದು ಒಂದೆರೆಡು ದಿನ ವಿಶ್ರಾಂತಿ ಬಳಿಕ ವಾಪಸ್ ಆಗಲಿದ್ದಾರೆ ಎಂದು ತಿಳಿಸಿದರು.

ಸಿಎಂ ಹೆಚ್. ಡಿ ಕುಮಾರಸ್ವಾಮಿ ಮಡಿಕೇರಿಯ ಇಬ್ಬನಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

Key words: DCM –Parameshwar- CM HD Kumaraswamy- resort-rest