Sunday, August 23, 2026

BDA Apartments

Home Front Page ಬಜೆಟ್ ಮಂಡಿಸಿದ ಮರುದಿನವೇ ದೆಹಲಿಗೆ ಭೇಟಿ ನೀಡಲಿದ್ದಾರೆ ಸಿಎಂ ಬೊಮ್ಮಾಯಿ.

ಬಜೆಟ್ ಮಂಡಿಸಿದ ಮರುದಿನವೇ ದೆಹಲಿಗೆ ಭೇಟಿ ನೀಡಲಿದ್ದಾರೆ ಸಿಎಂ ಬೊಮ್ಮಾಯಿ.

ಬೆಂಗಳೂರು,ಫೆಬ್ರವರಿ,14,2023(www.justkannada.in):  ಫೆಬ್ರವರಿ 17 ರಂದು ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇದು ಅವರ ಸರ್ಕಾರದ ಕೊನೆಯ ಬಜೆಟ್ ಆಗಲಿದೆ.

ಈ ನಡುವೆ ಬಜೆಟ್ ಮಂಡನೆಯಾದ ಮರುದಿನವೇ ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಫೆಬ್ರವರಿ 18 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ 49ನೇ ಜಿಎಸ್ ಟಿ ಸಭೆ ನಡೆಯಲಿದ್ದು ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಲಿದ್ದಾರೆ.

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ 12,101 ಕೋಟಿ ರೂ. ಜಿಎಸ್ ಟಿ ಬಾಕಿ ಹಣ ಬರಬೇಕಿದೆ. ಜಿಎಸ್ ಟಿ ಬಾಕಿ ಹಣ ನೀಡುವಂತೆ ಕೇಂದ್ರದ ಮುಂದೆ ಸಿಎಂ ಬೊಮ್ಮಾಯಿ ಬೇಡಿಕೆ ಇಡುವ ಸಾಧ್ಯತೆ ಇದೆ ಎನ್ನಲಾಗಿದೆ.

Key words: CM –Basavaraj Bommai –Delhi- after – budget