ಬೆಂಗಳೂರು,ಫೆಬ್ರವರಿ,16,2023(www.justkannada.in): ಟಿಪ್ಪು ರೀತಿ ಸಿದ್ದರಾಮಯ್ಯರನ್ನ ಹೊಡೆದು ಹಾಕೋಣ ಎಂಬ ಸಚಿವ ಅಶ್ವತ್ ನಾರಾಯಣ್ ಹೇಳಿಕೆ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿ ಆಡಳಿತ ಪಕ್ಷ ಮತ್ತು ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.![]()
ಸಚಿವ ಅಶ್ವಥ್ ನಾರಾಯಣ್ ಹೇಳಿಕೆಯನ್ನ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಶಾಸಕ ಯುಟಿ ಖಾದರ್, ಮಂತ್ರಿಯಾಗಿ ಈ ರೀತಿ ಹೇಳಿಕೆ ಸರಿಯಲ್ಲ. ಅಶ್ವಥ್ ನಾರಾಯಣ್ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು. ಅಶ್ವಥ್ ವಿರುದ್ದ ಕೇಸ್ ಹಾಕಬೇಕು. ಈ ರೀತಿ ಹೇಳಿಕೆ ನೀಡಿ ರಾಜಕೀಯ ಲಾಭ ಪಡೆಯೋದು ಬೇಡ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸದಸ್ಯರ ಆಕ್ರೋಶದ ನಡುವೆ ಸಚಿವ ಅಶ್ವಥ್ ನಾರಾಯಣ್ ಮಾತನಾಡಿ ಮತ್ತೆ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ ಪಕ್ಷ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಕಲಾಪವನ್ನ ಸ್ಪೀಕರ್ ಕಾಗೇರಿ ಕೆಲಕಾಲ ಮುಂದೂಡಿದರು.
Key words: Minister-Aswath Narayan- statement –Assembly- Outrage -Congress







