ಕೊಪ್ಪಳ,ಫೆಬ್ರವರಿ,16,2023(www.justkannada.in): ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ರಾಜ್ಯ ವಿಧಾನಸಭಾ ಚುನಾವಣೆ ಎದುರಿಸಲು ಸಜ್ಜಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ತಮ್ಮ ಪಕ್ಷದ
ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದಾರೆ.![]()
ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಇಂದು ಐದು ಕ್ಷೇತ್ರಗಳಿಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಗಳ ಹೆಸರನ್ನ ಮಾಜಿ ಸಚಿವ ಜನಾರ್ಧನರೆಡ್ಡಿ ಪ್ರಕಟಿಸಿದ್ದಾರೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ವಿಧಾನಸಭಾ ಕ್ಷೇತ್ರಕ್ಕೆ-ಧರೆಪ್ಪ ನಾಯಕ, ಕೊಪ್ಪಳ ಜಿಲ್ಲೆಯ ಕನಕಗಿರಿಗೆ-ಡಾ.ಚಾರುಲ್ ದಾಸರಿ, ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರಕ್ಕೆ-ಶ್ರೀಕಾಂತ್, ರಾಯಚೂರು ಜಿಲ್ಲೆ ಸಿಂಧನೂರು ಕ್ಷೇತ್ರ-ನೆಕ್ಕಂಟಿ ಮಲ್ಲಿಕಾರ್ಜುನ, ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರ-ಮಹೇಶ್ ಅಭ್ಯರ್ಥಿಯನ್ನಾಗಿ ಪ್ರಕಟಿಸಿದ್ದಾರೆ.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜನಾರ್ಧನ ರೆಡ್ಡಿ, ಗೆಲ್ಲುತ್ತಾರೆ ಎನ್ನುವ ನಂಬಿಕೆಯಿಂದ ಅಭ್ಯರ್ಥಿ ಘೋಷಣೆ ಮಾಡಿದ್ದೇವೆ. ಸರ್ವೇ ಮಾಡಿಸಿ ಗೆಲ್ಲುವ ಅಭ್ಯರ್ಥಿಗಳನ್ನ ಘೋಷಣೆ ಮಾಡುತ್ತಿದ್ದೆವೆ. ನಾನು ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.
Key words: Former minister- Janardhana Reddy -announced – KRPP party- candidates







