ಬೆಂಗಳೂರು,ಫೆಬ್ರವರಿ,21,2023(www.justkannada.in): ವೇತನ ಪರಿಷ್ಕರಣೆ ಮಾಡುವಂತೆ ಸಾರಿಗೆ ನೌಕರರು ಬೇಡಿಕೆ ಇಟ್ಟಿದ್ದಾರೆ. ಹಣಕಾಸು ಇತಿಮಿತಿಯಲ್ಲಿ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.![]()
ವೋಲ್ವೋ, ಅಂಬಾರಿ ಬಸ್ ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಾರಿಗೆ ನೌಕರರ 7ರಿಂದ 8 ಬೇಡಿಕೆ ಈಡೇರಿಸಲಾಗಿದೆ. ಈಗ ವೇತನ ಪರಿಷ್ಕರಣೆಯ ಬೇಡಿಕೆ ಇಟ್ಟಿದ್ದಾರೆ. ಹಣಕಾಸು ಇತಿಮಿತಿಯಲ್ಲಿ ಇದಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಶಾಲೆ ಆರಂಭವಾದಾಗ ಎಲ್ಲಾ ತಾಲ್ಲೂಕುಗಳಲ್ಲಿ 4 ರಿಂದ 5 ಮಿನಿಬಸ್ ಓಡಾಡುತ್ತಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದುಡಿಯುವ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದ ಉಚಿತ ಬಸ್ ಪಾಸ್ ನೀಡುವಂತೆ ಸಾರಿಗೆ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
Key words: Action – increase – salary – transport –employees-CM-Basavaraj Bommai.







