Sunday, August 23, 2026

BDA Apartments

Home Front Page ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಸ್ವೀಕಾರ ಪ್ರಕರಣ: ಬಿಜೆಪಿ ಭ್ರಷ್ಟಾಚಾರಕ್ಕೆ ಇನ್ನೇನು ಸಾಕ್ಷಿ ಬೇಕು- ಮಾಜಿ...

ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಸ್ವೀಕಾರ ಪ್ರಕರಣ: ಬಿಜೆಪಿ ಭ್ರಷ್ಟಾಚಾರಕ್ಕೆ ಇನ್ನೇನು ಸಾಕ್ಷಿ ಬೇಕು- ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್.

ಬೆಳಗಾವಿ,ಮಾರ್ಚ್,3,2023(www.justkannada.in):  ಬಿಜೆಪಿ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಿಎಂ  ಬಸವರಾಜ ಬೊಮ್ಮಾಯಿ ದಾಖಲೆ ಕೇಳಿದ್ದಾರೆ. ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ  ಪುತ್ರ ಲಂಚ ಪಡೆಯುವಾಗ ಲೋಕಾಯುಕ್ತಕ್ಕೆ  ಸಿಕ್ಕಿಬಿದ್ದಿದ್ದಾನೆ. ಭ್ರಷ್ಟಾಚಾರಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಟಾಂಗ್​ ನೀಡಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸಿದ‍್ಧರಾಮಯ್ಯ, ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಒಳ್ಳೆಯ ಆಡಳಿತ ಕೊಡಲಿಲ್ಲ. ಜನರ ಪರವಾಗಿ ಕೆಲಸ ಮಾಡಲಿಲ್ಲ, ಬರೀ ಭ್ರಷ್ಟಾಚಾರ, ಲೂಟಿ ಹೊಡೆಯುದರಲ್ಲಿ ನಿರತರಾಗಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ 40% ಕಮಿಷನ್ ವಿಚಾರವಾಗಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ಪ್ರಧಾನಿಗೆ ಪತ್ರ ಬರೆದರೂ, ಪ್ರಧಾನಿ ಎನೂ ಕ್ರಮ ಕೈಗೊಳ್ಳಲಿಲ್ಲ. ಪ್ರಧಾನ ಮಂತ್ರಿಗಳು ಕೂಡ ಕರ್ನಾಟಕ ರಾಜ್ಯ ಸರ್ಕಾರದ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ ಅನ್ನೋ ಸಂದೇಶ ಜನರಿಗೆ ರವಾನೆಯಾಗಿದೆ  ಎಂದು ಕಿಡಿಕಾರಿದರು.

ಬಿಜೆಪಿಯವರು ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿದ್ದಲ್ಲ. ಆಪರೇಷನ್ ಕಮಲ ಮೂಲಕ ಅನೈತಿಕವಾಗಿ ಸರ್ಕಾರ ರಚನೆ ಮಾಡಿದ್ದರು. ಸಮ್ಮಿಶ್ರ ಸರ್ಕಾರ ಮಾಡಿ ಹೆಚ್.ಡಿ ಕುಮಾರಸ್ವಾಮಿಯನ್ನ ಸಿಎಂ ಮಾಡಿದವು. ಆದರೆ ಅವರ ಕಾರ್ಯವೈಖರಿಯಿಂದ ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು. ಇದಕ್ಕೆ ಕಾಯುತ್ತಿದ್ದ ಬಿಜೆಪಿ ಆಪರೇಷನ್ ಕಮಲ ಮಾಡಿ ಸರ್ಕಾರ ಮಾಡಿದರು ಎಂದು ವಾಗ್ದಾಳಿ ನಡೆಸಿದರು.

Key words: MLA’s-son –accepting- bribe case-Siddaramaiah – CM Bommai.