Sunday, August 23, 2026

BDA Apartments

Home Front Page ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಗೆ ರಾಜ್ಯ ಸರಕಾರದ ಗುಡ್ ನ್ಯೂಸ್ !

ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಗೆ ರಾಜ್ಯ ಸರಕಾರದ ಗುಡ್ ನ್ಯೂಸ್ !

ಬೆಂಗಳೂರು, ಮಾರ್ಚ್ 04, 2023 (www.justkannada.in): ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ಗುತ್ತಿಗೆ ನೌಕರರಿಗೆ ಸಂಭಾವನೆಯನ್ನು ದಿನಾಂಕ 01-04-2023ರಿಂದ ಜಾರಿಗೆ ಬರುವಂತೆ ಶೇ.15ರಷ್ಟು ಹೆಚ್ಚಿಸಲಾಗಿದೆ. ಈ ಆದೇಶವು ಒಳಗುತ್ತಿಗೆ, ಗುತ್ತಿಗೆ ನೌಕರರಿಗೆ ಮಾತ್ರವೇ ಅನ್ವಯವಾಗಲಿದೆ.

ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವಿಟ್ ಮಾಡಿ ಮಾಹಿತಿ ನೀಡಿದ್ದಾರೆ.

ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ ಆದೇಶ ಮಾಡಿದ್ದು, ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಲಾಗಿದೆ ಎಂದಿದ್ದಾರೆ.