Sunday, August 23, 2026

BDA Apartments

Home Front Page ಮಹಿಳಾ ಪ್ರೀಮಿಯರ್ ಲೀಗ್: ರಾಯಲ್ ಚಾಲೆಂಜರ್ಸ್ ಬೆಂಗಳೂರು-ಡೆಲ್ಲಿ ಕ್ಯಾಪಿಟಲ್ಸ್ ಫೈಟ್

ಮಹಿಳಾ ಪ್ರೀಮಿಯರ್ ಲೀಗ್: ರಾಯಲ್ ಚಾಲೆಂಜರ್ಸ್ ಬೆಂಗಳೂರು-ಡೆಲ್ಲಿ ಕ್ಯಾಪಿಟಲ್ಸ್ ಫೈಟ್

ಬೆಂಗಳೂರು, ಮಾರ್ಚ್ 05, 2023 (www.justkannada.in): ಮಹಿಳಾ ಪ್ರೀಮಿಯರ್ ಲೀಗ್‌ನ ಚೊಚ್ಚಲ ಆವೃತ್ತಿಗೆ ಶನಿವಾರ ಚಾಲನೆ ದೊರೆತಿದ್ದು, ಇಂದು 2ನೇ ದಿನ 2 ಹೈವೋಲ್ಟೇಜ್ ಪಂದ್ಯಗಳು ನಡೆಯಲಿವೆ.

ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣೆಸಲಿದೆ.

ಸ್ಮೃತಿ ಮಂದಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಮ್ಮ ಮೊದಲನೇ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ನಿನ್ನೆ ನಡೆದ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವಿನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿತ್ತು.