Sunday, September 20, 2026

BDA Apartments

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ B...
Home Crime ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,7,2023(www.justkannada.in):  ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ದಿನಗಳಿಂದ ನಾಪತ್ತೆಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.

ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 5 ಲಕ್ಷ ರೂ. ಬಾಂಡ್ ಇಬ್ಬರು ಶ್ಯೂರಿಟಿ ನೀಡುವಂತೆ ಸೂಚನೆ ನೀಡಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಲೋಕಾಯುಕ್ತ   ಪೊಲೀಸರು ದಾಖಲೆ ಸಲ್ಲಿಸುವವರೆಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಅಲ್ಲದೇ  48ಗಂಟೆಯೊಳಗೆ ಶರಣಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ.

Key words: High Court-granted- interim bail – MLA -Madal Virupakshappa