Monday, October 5, 2026

BDA Apartments

ಅಂಧ ಗಾಯಕಿಯರಿಗೆ ಮನೆ ನಿರ್ಮಿಸಿಕೊಟ್ಟ ನಟ ಜಗ್ಗೇಶ್ BDA JK_Adv BDA Adv
Home Front Page ಆರ್.ಧೃವನಾರಾಯಣ್ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಮಾಜಿ ಸಿಎಂ ಸಿದ್ಧರಾಮಯ್ಯ.

ಆರ್.ಧೃವನಾರಾಯಣ್ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಮಾಜಿ ಸಿಎಂ ಸಿದ್ಧರಾಮಯ್ಯ.

ಮೈಸೂರು,ಮಾರ್ಚ್,11,2023(www.justkannada.in): ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ವಿಧಿವಶರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ದಾವಣಗೆರೆಯಿಂದ ಮೈಸೂರಿಗೆ ಆಗಮಿಸಿದ ಮಾಜಿಸಿಎಂ ಸಿದ್ಧರಾಮಯ್ಯ ಮೈಸೂರಿನ ವಿಜಯ ನಗರ ನಿವಾಸದಲ್ಲಿ ಆರ್.ದೃವನಾರಾಯಣ್ ಅವರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಇದಕ್ಕೂ ಮು‍ನ್ನ ದಾವಣಗೆರೆಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ,  ಆರ್.ಧೃವನಾರಾಯಣ್ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದರು. ರಾಜ್ಯಾದ್ಯಂತ  ಓಡಾಡಿ ಪಕ್ಷ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿದ್ದರು. ಧೃವನಾರಾಯಣ್ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ. ನಾವು ಪ್ರಬುದ್ಧ ರಾಜಕಾರಣಿಯನ್ನ ಕಳೆದುಕೊಂಡಿದ್ದೇವೆ. ನಾರಾಯಣ್ ರಾಜ್ಯದ ಅಭಿವೃದ್ದಿಗೆ ಸದಾ ಚಿಂತಿಸುತ್ತಿದ್ದರು ಎಂದು ಹೇಳಿದರು.

Key words: Former CM- Siddaramaiah -final darshan – R. Dhruvanarayan  -mysore