Monday, October 26, 2026

Dasara Wishes

Sting operation DasraWishes_JK DasraWishes JK
Happy Dasara
Home Front Page ನಾಳೆ ಸರಕಾರಿ ಮಹಿಳಾ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ!

ನಾಳೆ ಸರಕಾರಿ ಮಹಿಳಾ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ!

ಬೆಂಗಳೂರು, ಮಾರ್ಚ್ 19, 2023 (www.justkannada.in): ಮಾರ್ಚ್ 20, 2023ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಚರಿಸಲಾಗುತ್ತಿದೆ.

ಈ ದಿನದಂದು ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಸರ್ಕಾರಿ ನೌಕರರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಮಾ.20ರಂದು ಸರ್ಕಾರಿ ನೌಕರರ ಸಂಘದಿಂದ ಬೆಂಗಳೂರಿನ ವಿಧಾನ ಸೌಧದಲ್ಲಿರುವಂತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಅಧಿಕಾರಿ, ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾತಿ ಪ್ರಮಾಣಪತ್ರವನ್ನು ಸಲ್ಲಿಸುವ ಷರತ್ತಿಗೆ ಒಳಪಟ್ಟು, ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.