ಅಹಮದಾಬಾದ್, ಮಾರ್ಚ್,23,2023(www.justkannada.in): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ಕೋರ್ಟ್ ತೀರ್ಪು ನೀಡಿದೆ.![]()
2019 ರಲ್ಲಿ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪ ಮಾಡಲಾಗಿತ್ತು. ಈ ಬಗ್ಗೆ ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಗುಜರಾತ್ ಸೂರತ್ ಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಸೂರತ್ ಕೋರ್ಟ್ ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ಪ್ರಕಟಿಸಿ 2 ವರ್ಷಗಳ ಕಾಳ ಜೈಲು ಶಿಕ್ಷೆ ವಿಧಿಸಿದೆ. ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೆ ರಾಹುಲ್ ಗಾಂಧಿಗೆ 15 ಸಾವಿರ ರೂ. ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Derogatory -statement -case -against -PM Modi- Rahul Gandhi – 2 years -jail.







