ಬೆಂಗಳೂರು,ಮಾರ್ಚ್,24,2023(www.justkannada.in): ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪದೇ ಪದೇ ಆಗಮಿಸಿ ವಿವಿಧ ಕಾರ್ಯಕ್ರಮ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದರು.![]()
ಕುಮಾರಕೃಪಾ ರಸ್ತೆಯಲ್ಲಿರುವ ಮಾಜಿ ಸಿಎಂ ಬಿಎಸ್ ವೈ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಸಚಿವ ಗೋವಿಂದ ಕಾರಜೋಳ ಸಾಥ್ ನೀಡಿದರು.
ಬಿಎಸ್ ವೈ ನಿವಾಸದಲ್ಲಿ ಅಮಿತ್ ಶಾ ಅವರ ಜೊತೆ ಬಿಜೆಪಿ ನಾಯಕರು ಉಪಹಾರ ಕೂಟದಲ್ಲಿ ಪಾಲ್ಗೊಂಡಿದ್ದಾರೆ.
Key words: Union Home Minister -Amit Shah- visits- former CM- BS Yeddyurappa’s -residence







