Sunday, August 23, 2026

BDA Apartments

Home Front Page ಮಾಜಿ ಸಿಎಂ ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡ- ಸಿಎಂ...

ಮಾಜಿ ಸಿಎಂ ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡ- ಸಿಎಂ ಬೊಮ್ಮಾಯಿ ಆರೋಪ.

ಚಿಕ್ಕಬಳ್ಳಾಪುರ,ಮಾರ್ಚ್,27,2023(www.justkannada.in):  ಒಳಮೀಸಲಾತಿ ಜಾರಿಗೆ  ವಿರೋಧಿಸಿ ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಮನೆ ಮೇಲೆ ನಡೆದ  ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಮನೆ ಮೇಲೆ ನಡೆದ  ಕಲ್ಲು ತೂರಾಟದ ಹಿಂದೆ  ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ. ನಾವು ಸದಾಶಿವ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ. ನಮ್ಮ ಸಚಿವ ಸಂಪುಟ ತೀರ್ಮಾನದಂತೆ ಮಾಡಿದ್ದೇವೆ ಎಂದರು.

ಕಾಂಗ್ರೆಸ್ ಅವರ ಕೃತ್ಯವನ್ನು ಖಂಡಿಸುತ್ತೇನೆ. ಸಮಾಜ ಪ್ರಕ್ಷುಬ್ಧಗೊಳಿಸುವಂತಹ ಕೆಲಸ ಮಾಡಬಾರದು. ರಾಜಕೀಯ ಲಾಭಕ್ಕಾಗಿ ಇಂತಹ ಕೃತ್ಯ ಮಾಡುತ್ತಿದ್ದಾರೆ. ಒಂದು ರಾಷ್ಟ್ರೀಯ ಪಕ್ಷ ಮಾಡುವಂತಹ ಕೆಲಸವಲ್ಲ. ಈ ಕೃತ್ಯ ಕ್ಷಮೆಗೆ ಅರ್ಹವಲ್ಲ. ಕಾಂಗ್ರೆಸ್ ಶಕುನಿ ಕೆಲಸ ಮಾಡುತ್ತಿರುವ ಬಗ್ಗೆ ರಣದೀಪ್ ಸಿಂಗ ಸುರ್ಜೆವಾಲ ಮಾತನಾಡಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು.

Key words: Congress -behind – stone – former CM -BSY’s- house-CM Bommai