Sunday, October 25, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ರಾಜ್ಯ ವಿಧಾನಸಭಾ ಚುನಾವಣೆ: 58, 282 ಮತಗಟ್ಟೆಗಳ ಸ್ಥಾಪನೆ: 80  ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ...

ರಾಜ್ಯ ವಿಧಾನಸಭಾ ಚುನಾವಣೆ: 58, 282 ಮತಗಟ್ಟೆಗಳ ಸ್ಥಾಪನೆ: 80  ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ.

   ನವದೆಹಲಿ,ಮಾರ್ಚ್,29,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲು ಕೇಂದ್ರ ಚುನಾವಣಾ ಆಯೋಗ ಸುದ್ಧಿಗೋಷ್ಠಿ ನಡೆಸುತ್ತಿದೆ.

ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್ ಸುದ‍್ಧಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದ್ದಾರೆ.   ರಾಜ್ಯ ವಿಧಾನಸಭಾ ಚುನಾವಣೆಗೆ ಒಟ್ಟು 58, 282 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗುತ್ತದೆ  ಒಂದೊಂದು ಮತಗಟ್ಟೆಗೆ 883ಮತದಾರರು. ನಗರ  ಪ್ರದೇಶದಲ್ಲಿ 24,063 ಗ್ರಾಮೀಣ ಪ್ರದೇಶದಲ್ಲಿ  34 219 ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತದೆ.

 

80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗುತ್ತಿದೆ. ಮೊದಲೇ ಆಯೋಗದಲ್ಲಿ ನೋಂದಾಯಿಸಿಕೊಳ್ಳಬೇಕು.  ಜೇನುಕುರುಬ ಕಾಡುಕುರುಬ ಮತದಾರರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

Key words: State- Assembly –Elections-58, 282 polling- booths