Friday, August 14, 2026

BDA Apartments

Home Front Page ಇನ್ನೆರಡು ದಿನಗಳಲ್ಲಿ ಜೆಡಿಎಸ್ 2ನೇ ಪಟ್ಟಿ ರಿಲೀಸ್- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಇನ್ನೆರಡು ದಿನಗಳಲ್ಲಿ ಜೆಡಿಎಸ್ 2ನೇ ಪಟ್ಟಿ ರಿಲೀಸ್- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು,ಏಪ್ರಿಲ್,4,2023(www.justkannada.in): ಇನ್ನೆರಡು ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ  2ನೇ ಪಟ್ಟಿ  ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಅಭ್ಯರ್ಥಿಗಳ ವಿಚಾರದಲ್ಲಿ ಚರ್ಚಿಸಿದ್ದೇನೆ. ಅಭ್ಯರ್ಥಿಗಳ ಬಗ್ಗೆ ಚರ್ಚಿಸಿ ಪಟ್ಟಿ ಫೈನಲ್ ಮಾಡಿದ್ದೇನೆ.  ಇನ್ನರಡು ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದರು.

ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿಗೆ 60 ಸ್ಥಾನವಷ್ಟೇ ಬರುತ್ತೆ.  ಜೆಡಿಎಸ್ ಗೆ 120 ಸ್ಥಾನ ಬಂದೇ ಬರುತ್ತೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಅನಿತಾ ಕುಮಾರಸ್ವಾಮಿ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಪಕ್ಷ ಉಳಿಸುವ ಸಲುವಾಗಿ ಅನಿತಾರನ್ನ ಚುನಾವಣೆಗೆ ನಿಲ್ಲಿಸಿದ್ದೆ ಕಾರ್ಯಕರ್ತ  ಒತ್ತಡಕ್ಕೆ ಮಣಿದು ನಿಲ್ಲಿಸಿದ್ದೆ. ಆದರೆ ಮತ್ತೆ ಅಭ್ಯರ್ಥಿಯಾಗಲು ಅನಿತಾಗೆ ಒಲವು ಇಲ್ಲ. ಚುನಾವಣಾ ರಾಜಕೀಯದಿಂದ ಅನಿತಾ ದೂರವಿದ್ದಾರೆ ಎಂದು ತಿಳಿಸಿದರು.

Key words: JDS -2nd list -release – next- two days- Former CM -HD Kumaraswamy.