Tuesday, August 18, 2026

BDA Apartments

Home Cinema ರಾಜಕಾರಣ ನನಗೆ ಇಷ್ಟವಿಲ್ಲ: ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ- ನಟ ಕಿಚ್ಚ ಸುದೀಪ್ ಸ್ಪಷ್ಟನೆ.

ರಾಜಕಾರಣ ನನಗೆ ಇಷ್ಟವಿಲ್ಲ: ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ- ನಟ ಕಿಚ್ಚ ಸುದೀಪ್ ಸ್ಪಷ್ಟನೆ.

ಬೆಂಗಳೂರು,ಏಪ್ರಿಲ್,5,2023(www.justkannada.in): ನಟ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಾರೆಂದು ಹಬ್ಬಿದ್ದ ವದಂತಿಗೆ ಸ್ವತಃ ಕಿಚ್ಚ ಸುದೀಪ್ ಅವರೇ ಸ್ಪಷ್ಟನೆ ನೀಡಿ ಆ ವಿಚಾರಕ್ಕೆ ತೆರೆ ಎಳೆದಿದ್ದಾರೆ.

ಈ ಕುರಿತು ಬೆಂಗಳೂರಿನ ಜೆಪಿ ನಗರ ನಿವಾಸದಲ್ಲಿ ಮಾತನಾಡಿದ ನಟ ಸುದೀಪ್, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಯಾವ ಪಕ್ಷದಿಂದಲೂ ನಾನು ಚುನಾವಣೆಗೆ ನಿಲ್ಲುವುದಿಲ್ಲ. ನನ್ನ  ಸ್ನೇಹಿತರಿಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಚುನಾವಣೆ, ರಾಜಕಾರಣ ನನಗೆ ಇಷ್ಟವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಸುದ್ದಿಗೋಷ್ಠಿಗೆ ಹೋಗುತ್ತಿರುವುದು ಸತ್ಯ. ಸುದ್ದಿಗೋಷ್ಠಿಯಲ್ಲೇ ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ನಾನು ಯಾರ ಪರ ಕೂಡ ಟಿಕೆಟ್ ಕೇಳಿಲ್ಲ. ಪಕ್ಷದಿಂದ ಟಿಕೆಟ್ ಕೊಡಿಸುವಷ್ಟು ನಾನು ದೊಡ್ಡವನಲ್ಲ ಎಂದು ನಟ ಕಿಚ್ಚ ಸುದೀಪ್ ತಿಳಿಸಿದರು.

Key words: I -won’t- contest -elections- actor- Kiccha Sudeep