Wednesday, September 9, 2026

BDA Apartments

Home Front Page ಎರಡು ಕ್ಷೇತ್ರಗಳಿಂದ ಸ್ಪರ್ಧೆ ವಿಚಾರ: ಸ್ಪಷ್ಟನೆ ಕೊಟ್ಟ ಡಾ.ಜಿ.ಪರಮೇಶ್ವರ್.

ಎರಡು ಕ್ಷೇತ್ರಗಳಿಂದ ಸ್ಪರ್ಧೆ ವಿಚಾರ: ಸ್ಪಷ್ಟನೆ ಕೊಟ್ಟ ಡಾ.ಜಿ.ಪರಮೇಶ್ವರ್.

ತುಮಕೂರು,ಏಪ್ರಿಲ್,8,2023(www.justkannada.in):  ಮಾಜಿ ಸಿಎಂ ಸಿದ್ಧರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಮುಂದಾದ ಹಿನ್ನೆಲೆ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಸಹ ಎರಡು ಕ್ಷೇತ್ರಗಳಿಂದ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ ಎಂದು ವರದಿಯಾಗಿತ್ತು.

ಆದರೆ ಈ ಬಗ್ಗೆ ಕೊರಟಗೆರೆಯಲ್ಲಿ ಸ್ಪಷ್ಟನೆ ನೀಡಿರುವ ಡಾ.ಜಿ.ಪರಮೇಶ್ವರ್, ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿಲ್ಲ. ನಾನು 2 ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ. ಈಗಾಗಲೇ ಪಕ್ಷ  ಕೊರಟಗೆರೆಯ ಟಿಕೆಟ್  ಘೋಷಿಸಿದೆ. ಕೊರಟಗೆರೆಯ ಜನ ಪ್ರೀತಿಯಿಂದ ಕಂಡಿದ್ದಾರೆ. ಕೊರಟಗೆರೆ ಜನ ಎರಡು ಬಾರಿ ಗೆಲ್ಲಿಸಿದ್ದಾರೆ. ಹೀಗಾಗಿ ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲ್ಲ ಎಂದು ತಿಳಿಸಿದರು.

ತುಮಕೂರು ಕಾಂಗ್ರೆಸ್ ನಲ್ಲಿ ಭಿನ್ನಮತ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಶಫಿ ಅಹ್ಮದ್  ಕುಟುಂಬಕ್ಕೆ ಟಿಕೆಟ್ ತಪ್ಪಲು ಕಾರಣ ನಾನಲ್ಲ. ಶಾಸಕರಾಗಿ ಶಫಿ ಅಹ್ಮದ್ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ ಎಂದು ಹೇಳಿದರು.

Key words:  Compet – two- Constituency- Dr. G. Parameshwar- clarified.