ಬೆಂಗಳೂರು,ಏಪ್ರಿಲ್,10,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿದ್ದು ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಜೆಡಿಎಸ್ 2ನೇ ಪಟ್ಟಿ ಬಿಡುಗಡೆಯನ್ನ ಮುಂದೂಡುತ್ತಲೇ ಬಂದಿದೆ.
ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಮಯ ನೋಡಿ ಅಭ್ಯರ್ಥಿಗಳ 2ನೇ ಲೀಸ್ಟ್ ಬಿಡುಗಡೆ ಮಾಡುತ್ತೇವೆ. ಸದ್ಯ ಪಂಚ ರತ್ನಯಾತ್ರೆಯಲ್ಲಿ ನಾನು ಬ್ಯುಸಿಯಾಗಿದ್ದೇನೆ. ಈಗಗಲೇ ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿದ್ದೇನೆ, ಶೀಘ್ರದಲ್ಲೇ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Key words: release- JDS -2nd list- Former CM -HD Kumaraswamy.






