Sunday, August 23, 2026

BDA Apartments

Home Front Page ಹೈಕಮಾಂಡ್ ಒತ್ತಡಕ್ಕೆ ಮಣಿದು ವರುಣಾದಲ್ಲಿ ವಿ.ಸೋಮಣ್ಣ ಸ್ಪರ್ಧೆ: ಸಿದ್ದರಾಮಯ್ಯ ಪರ ಕ್ಷೇತ್ರದ ಜನರಿದ್ದಾರೆ-ಯತೀಂದ್ರ ಸಿದ್ಧರಾಮಯ್ಯ.

ಹೈಕಮಾಂಡ್ ಒತ್ತಡಕ್ಕೆ ಮಣಿದು ವರುಣಾದಲ್ಲಿ ವಿ.ಸೋಮಣ್ಣ ಸ್ಪರ್ಧೆ: ಸಿದ್ದರಾಮಯ್ಯ ಪರ ಕ್ಷೇತ್ರದ ಜನರಿದ್ದಾರೆ-ಯತೀಂದ್ರ ಸಿದ್ಧರಾಮಯ್ಯ.

ಮೈಸೂರು,ಏಪ್ರಿಲ್,12,2023(www.justkannada.in): ಹೈಕಮಾಂಡ್ ಒತ್ತಡಕ್ಕೆ ಮಣಿದು ವರುಣಾದಲ್ಲಿ ವಿ.ಸೋಮಣ್ಣ ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಪರ ವರುಣಾ ಕ್ಷೇತ್ರದ ಜನರಿದ್ದಾರೆ ಎಂದು ಶಾಸಕ ಯತೀಂದ್ರ ಸಿದ್ಧರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ,  ವರುಣಾದಲ್ಲಿ ಯಾರೇ ಸ್ಪರ್ಧೆ ಮಾಡಿದರೂ ತಲೆಕೆಡಿಸಿಕೊಳ್ಳುವುದಿಲ್ಲ ಸಿದ್ದರಾಮಯ್ಯ ಪರ ವರುಣಾ ಕ್ಷೇತ್ರದ ಜನ ಇದ್ದಾರೆ. ಒಲ್ಲದ ಮನಸ್ಸಿನಿಂದ ಸೋಮಣ್ಣ ವರುಣಾದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ.  ವರುಣಾದಲ್ಲಿ ಸಿದ್ಧರಾಮಯ್ಯ ವಿರುದ್ದ ಸ್ಪರ್ಧಿಸಲ್ಲ ಎಂದು ಸೋಮಣ್ಣ ಹೇಳಿದ್ದರು. ಆದರೆ ಹೈಕಮಾಂಡ್ ಒತ್ತಡಕ್ಕೆ ಮಣಿದು ಸೋಮಣ್ಣ ಸ್ಪರ್ಧೆ ಮಾಡುತ್ತಿದ್ದಾರೆ. ಎಲ್ಲರೂ ಕೂಡ ಸಿದ್ಧರಾಮಯ್ಯರನ್ನ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಈ ಬಾರಿಯೂ ಒಳ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ಅನೈತಿಕವಾಗಿ ಸಿದ್ಧರಾಮಯ್ಯರನ್ನ ಸೋಲಿಸಲು ಪ್ರಯತ್ನ ಮಾಡುತ್ತಿದ್ದಾರೆ. ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಒಳಒಪ್ಪಂದ ಆಗಿತ್ತು. ಹೀಗಾಗಿ ಈ ಬಾರಿ ನಾವು ಎಚ್ಚರಿಕೆಯಿಂದ ಇದ್ದೇವೆ ಎಂದು ಯತೀಂದ್ರ ಸಿದ್ಧರಾಮಯ್ಯ ತಿಳಿಸಿದರು.

Key words: V. Somanna-contests – Varuna –Siddaramaiah-constituency – Yatindra Siddaramaiah.