Tuesday, August 11, 2026

BDA Apartments

Home Front Page ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ: ತಪ್ಪಿದ ಅನಾಹುತ.

ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ: ತಪ್ಪಿದ ಅನಾಹುತ.

ಉಡುಪಿ,ಏಪ್ರಿಲ್,13,2023(www.justkannada.in):  ಸಿಎಂ ಬಸವರಾಜ ಬೊಮ್ಮಾಯಿ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಬಳಿ ಈ ಘಟನೆ ನಡೆದಿದೆ. ಅರೆಶಿರೂರು ಹೆಲಿಪ್ಯಾಡ್ ಬಳಿ ಸಿಎಂ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಬೆಂಕಿ ಕಾಣಿಸಿಂಡಿದೆ. ಹೆಲಿಕಾಪ್ಟರ್ ಫ್ಯಾನ್ ಗಾಳಿಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು,   ಸಿಎಂ ಎಸ್ಕಾರ್ಟ್ ಹೋದ ಬಳಿಕ  ಈ ಘಟನೆ ನಡೆದಿದ್ದು ಸದ್ಯ ಅನಾಹುತ ತಪ್ಪಿದೆ.

ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದರು.  ಸಿಎಂ ಬಸವರಾಜ ಬೊಮ್ಮಾಯಿ ಕೊಲ್ಲೂರು ಮುಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.

Key words: Fire- near- helipad – CM Bommai –helicopter- landing