Tuesday, August 11, 2026

BDA Apartments

Home Front Page ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆಯಿಂದ ನನಗೆ ಬಹಳ ದುಃಖ ಆಗುತ್ತಿದೆ- ಸಿಎಂ ಬಸವರಾಜ ಬೊಮ್ಮಾಯಿ.

ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆಯಿಂದ ನನಗೆ ಬಹಳ ದುಃಖ ಆಗುತ್ತಿದೆ- ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಏಪ್ರಿಲ್,14,2023(www.justkannada.in): ಅಥಣಿ ಬಿಜೆಪಿ ಟಿಕೆಟ್   ಕೈತಪ್ಪಿದ ಹಿನ್ನೆಲೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ  ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದು ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಬೇಸರ ಹೊರ ಹಾಕಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರುತ್ತಿರುವುದು ನನಗೆ ಬಹಳ ದುಃಖವನ್ನುಂಟು ಮಾಡಿದೆ. ಲಕ್ಷ್ಮಣ್ ಸವದಿ ಜತೆ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಲಕ್ಷ್ಮಣ್ ಸವದಿಗೆ ಕಾಂಗ್ರೆಸ್ ನಲ್ಲಿ ಭವಿಷ್ಯ ಕಂಡಿದೆ. ಹೀಗಾಗಿ ಹೋಗಿದ್ದಾರೆ ಎಂದರು.

ಕಾಂಗ್ರೆಸ್​ ಗೆ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳು ಗತಿಯಿಲ್ಲ. ಅದಕ್ಕಾಗಿ ಬೇರೆ ಪಕ್ಷಗಳಿಂದ ಕೆಲವರನ್ನು ಸೇರಿಸಿಕೊಳ್ಳುತ್ತಿದ್ದಾರೆ. ಸಹಜವಾಗಿಯೇ ಆಡಳಿತ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿರುತ್ತಾರೆ. ಕಾರ್ಯಕರ್ತರು ಪಕ್ಷದ ಪರವಾಗಿದ್ದಾರೆ ಸಾಕು ಬಿಜೆಪಿ ಗೆಲ್ಲಲಿದೆ. ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ  ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Laxman Savadi – joining -Congress- CM Basavaraj Bommai-displeasure