Sunday, August 9, 2026

BDA Apartments

Home Crime ಪ್ರೇಯಸಿಯ ಹುಟ್ಟು ಹಬ್ಬ ಆಚರಿಸಿ ಬಳಿಕ ಚಾಕುವಿನಿಂದ ಇರಿದು ಕೊಲೆಗೈದ ಪ್ರೇಮಿ.

ಪ್ರೇಯಸಿಯ ಹುಟ್ಟು ಹಬ್ಬ ಆಚರಿಸಿ ಬಳಿಕ ಚಾಕುವಿನಿಂದ ಇರಿದು ಕೊಲೆಗೈದ ಪ್ರೇಮಿ.

ಬೆಂಗಳೂರು ,ಏಪ್ರಿಲ್,15,2023(www.justkannada.in): ಪ್ರಿಯಕರನೋರ್ವ ತನ್ನ ಪ್ರೇಯಸಿಯ ಹುಟ್ಟುಹಬ್ಬವನ್ನ ಆಚರಿಸಿ, ಖುಷಿಯಲ್ಲಿ ಕೇಕ್ ಕತ್ತರಿಸಿ ಬಳಿಕ ಆಕೆಯ ಕುತ್ತಿಗೆಯನ್ನ ಕೊಯ್ದು ಹತ್ಯೆಗೈದಿರುವ ಘಟನೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಲಗ್ಗೆರೆಯಲ್ಲಿ ಈ ಘಟನೆ ನಡೆದಿದ್ದು ನವ್ಯ (24) ಕೊಲೆಯಾದ ಯುವತಿ. ಪ್ರಶಾಂತ್ ಎಂಬಾತನೇ ತನ್ನ ಪ್ರೇಯಸಿಯನ್ನ ಹತ್ಯೆಗೈದ ಪ್ರೇಮಿ. ಇತ್ತೀಚೆಗೆ ಮೃತ ಯುವತಿ ಬೇರೆಯವರ ಜೊತೆ ಚಾಟಿಂಗ್ ಮಾಡುತ್ತಾ ಇದ್ದಳು ಎಂದು ಪ್ರಶಾಂತ್ ಅನುಮಾನಿಸಿದ್ದನಂತೆ. ಇದೇ ಕಾರಣಕ್ಕೆ ಇಬ್ಬರ ಮಧ್ಯೆ ಪದೇ ಪದೇ ಜಗಳ ಆಗುತ್ತಿಂತೆ. ಇದೀಗ ಅನುಮಾನದ ಮೇಲೆ ಬರ್ತಡೇ ಆಚರಿಸಿ ಬಳಿಕ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾನೆ.

ಪೊಲೀಸ್ ಇಲಾಖೆಗೆ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನವ್ಯ, ಕಳೆದ ಆರು ವರ್ಷಗಳಿಂದ ಪ್ರಶಾಂತ್ ಎಂಬುವವನನ್ನ ಪ್ರೀತಿಸುತ್ತಿದ್ದಳು. ನವ್ಯ ಹಾಗೂ ಪ್ರಶಾಂತ್ ಇಬ್ಬರು ಕನಕಪುರ ಮೂಲದ ದೂರ ಸಂಬಂಧಿಕರು. ಕಳೆದ ಮಂಗಳವಾರ ನವ್ಯ ಬರ್ತಡೇ ಇತ್ತು. ಅಂದು ಬ್ಯುಸಿ ಇದ್ದೇನೆಂದು ಹೇಳಿದ್ದ ಪ್ರಶಾಂತ್ ನಿನ್ನೆ  ಹುಟ್ಟುಹಬ್ಬ ಆಚರಣೆಗೆ ಪ್ಲಾನ್ ಮಾಡಿ ಅದರಂತೆ ರಾತ್ರಿ ಕೇಕ್ ಕಟ್ಟು ಮಾಡಿ ಕೇಕ್‌ ತಿನ್ನಿಸಿದ್ದ.

ಬಳಿಕ ಹರಿತವಾದ ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾನೆ. ಇನ್ನು ಮೃತ ಯುವತಿಯ ಶವವನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: Lover- murder-celebrating -his girlfriend’s- birthday.