Sunday, September 13, 2026

BDA Apartments

ಜಗದೀಶ್ ಶೆಟ್ಟರ್ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ: ಟಿಕೆಟ್ ಬಗ್ಗೆ ವರಿಷ್ಠರಿ...
Home Front Page ಜಗದೀಶ್ ಶೆಟ್ಟರ್ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ: ಟಿಕೆಟ್ ಬಗ್ಗೆ ವರಿಷ್ಠರಿಂದ ಸೂಕ್ತ ನಿರ್ಧಾರ- ಕೇಂದ್ರ...

ಜಗದೀಶ್ ಶೆಟ್ಟರ್ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ: ಟಿಕೆಟ್ ಬಗ್ಗೆ ವರಿಷ್ಠರಿಂದ ಸೂಕ್ತ ನಿರ್ಧಾರ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ಹುಬ್ಬಳ್ಳಿ,ಏಪ್ರಿಲ್,15,2023(www.justkannada.in): ಜಗದೀಶ್ ಶೆಟ್ಟರ್ ಅವರು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಕಟ್ಟಿ ಬೆಳೆಸುವಲ್ಲಿ ಜಗದೀಶ್ ಶೆಟ್ಟರ್ ಅವರ ಪಾತ್ರವೂ ಇದೆ. 30 ವರ್ಷಗಳಿಂದ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ.  ಬಿಜೆಪಿಗೆ ಶೆಟ್ಟರ್ ಅವರ ಸೇವೆ ಮುಂದೆಯೂ ಅಗತ್ಯವಾಗಿದೆ ಎಂದರು.ಜಗದೀಶ್ ಶೆಟ್ಟರ್ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ joshi

ಜಗದೀಶ್ ಶೆಟ್ಟರ್ ಜೊತೆ ಟಿಕೆಟ್ ವಿಚಾರವಾಗಿ ಸುದೀರ್ಘವಾಗಿ ಚರ್ಚೆ ಮಾಡಿದ್ದೇನೆ. ಕೇಂದ್ರದ ವರಿಷ್ಠರು ಸಹ ಚರ್ಚೆ ಮಾಡುತ್ತಿದ್ದಾರೆ. ಪಕ್ಷಕ್ಕಾಗಿ ಶೆಟ್ಟರ್ ಅವರ ಸೇವೆಯ ಅಗತ್ಯತೆ ಕುರಿತು ಅವರ ಜೊತೆ ಚರ್ಚಿಸಿದ್ದೇನೆ. ಹೈಕಮಾಂಡ್ ಕೂಡ ಅವರ ಪಕ್ಷ ಸೇವೆಯನ್ನ ಪರಿಗಣಿಸಿ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ತಿಳಿಸಿದರು.

Key words: no question -Jagdish Shettar -leaving –BJP-Union Minister -Prahlad Joshi.