Friday, September 18, 2026

BDA Apartments

Home Front Page ಲಕ್ಷ್ಮಣ್ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ವಿಚಾರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೇಸರ.

ಲಕ್ಷ್ಮಣ್ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ವಿಚಾರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೇಸರ.

ವಿಜಯಪುರ,ಏಪ್ರಿಲ್,15,2023(www.justkannada.in):   ಅಥಣಿ ಕ್ಷೇತ್ರದಿಂದ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿಜಯಪುರದಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್,  ರಾಜಕಾರಣದಲ್ಲಿ ನನಗೂ ಅಪಮಾನವಾಗಿದೆ. ಸಹನೆ ತಾಳ್ಮೆಯಿಂದ ತೀರ್ಮಾನ ತೆಗೆದುಕೊಳ್ಳಬೇಕು.  ಮಂತ್ರಿ ಡಿಸಿಎಂ  ಆಗಲು ನಾನೂ ಅರ್ಹನಿದ್ದೆ ಆದರೆ ನನಗೆ ಸ್ಥಾನಮಾನ ಕೊಡಲಿಲ್ಲ. ಪಕ್ಷಕ್ಕೆ ಅವಶ್ಯಕತೆ ಇದ್ದಾಗ ಸ್ಥಾನ ನೀಡುತ್ತಾರೆ ಎಂದರು. ಲಕ್ಷ್ಮಣ್ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ವಿಚಾರ basanagowda patil yatnal

ಬಿಜೆಪಿ ಪಕ್ಷದಲ್ಲಿದ್ದರೇ ಸವದಿಗೆ ಉತ್ತಮ ಭವಿಷ್ಯ ಇರುತ್ತಿತ್ತು ಸವದಿ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿಗೆ ಹಿನ್ನಡೆಯಾಗಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

Key words: Laxman Savadi –joining –Congress-MLA -Basana Gowda Patil Yatnal