Tuesday, August 18, 2026

BDA Apartments

Home Front Page ರಾಜ್ಯ ವಿಧಾನಸಭಾ ಚುನಾವಣೆ: ಬಿವೈ ವಿಜಯೇಂದ್ರ, ಡಾ.ಜಿ.ಪರಮೇಶ್ವರ್ ಸೇರಿ ಹಲವು ನಾಯಕರಿಂದ ನಾಮಪತ್ರ ಸಲ್ಲಿಕೆ.

ರಾಜ್ಯ ವಿಧಾನಸಭಾ ಚುನಾವಣೆ: ಬಿವೈ ವಿಜಯೇಂದ್ರ, ಡಾ.ಜಿ.ಪರಮೇಶ್ವರ್ ಸೇರಿ ಹಲವು ನಾಯಕರಿಂದ ನಾಮಪತ್ರ ಸಲ್ಲಿಕೆ.

ಬೆಂಗಳೂರು,ಏಪ್ರಿಲ್,19,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಇಂದು ಸಹ ಹಲವು ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಶಿಕಾರಿಪುರದ ಬಿಜೆಪಿ ಅಭ್ಯರ್ಥಿಯಾಗಿ ಬಿವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮಾಡಿದರು. ಬಿವೈ ವಿಜಯೇಂದ್ರಗೆ ತಂದೆ ಬಿಎಸ್ ಯಡಿಯೂರಪ್ಪ ಪತ್ನಿ ಪ್ರೇಮಾ, ಸೋದರ ಬಿವೈ ರಾಘವೇಂದ್ರ ಸಾಥ್ ನೀಡಿದರು.

ಇತ್ತ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ಡಾ ಜಿ. ಪರಮೇಶ್ವರ್ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಘುನಾಥನಾಯ್ಡು ನಾಮಪತ್ರ ಸಲ್ಲಿಕೆ  ಮಾಡಿದರು. ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಸಾಥ್ ನೀಡಿದರು.

ತುಮಕೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಹಾಗೆಯೇ ಬಿಜೆಪಿ ಟಿಕೆಟ್  ಸಿಗದ ಹಿನ್ನೆಲೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಪಕ್ಷೇತರ ಅಭ್ಯರ್ಥಿಯಾಗಿ ಗೂಳಿಹಟ್ಟಿ ಶೇಖರ್ ನಾಮಪತ್ರ ಸಲ್ಲಿಕೆ ಮಾಡಿದರು.

Key words: State -Assembly- Election-Submission -nomination – many leaders