Friday, September 18, 2026

BDA Apartments

Home Front Page ವರುಣಾದಲ್ಲಿ ಸಿದ್ಧರಾಮಯ್ಯ ಮುಗಿಸಲು ಕಾಂಗ್ರೆಸ್ ಹುನ್ನಾರ- ಸಿಎಂ ಬಸವರಾಜ ಬೊಮ್ಮಾಯಿ.

ವರುಣಾದಲ್ಲಿ ಸಿದ್ಧರಾಮಯ್ಯ ಮುಗಿಸಲು ಕಾಂಗ್ರೆಸ್ ಹುನ್ನಾರ- ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಏಪ್ರಿಲ್,22,2023(www.justkannada.in): ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಸೇರಿ ಎಲ್ಲರೂ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರನ್ನು  ಮುಗಿಸುತ್ತಾರೆ ಎಂಬ ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಇಂತಹ ಹೇಳಿಕೆಗಳಿಗೆ ಉತ್ತರ ಕೊಡಲು ಆಗಲ್ಲ. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಕಾಂಗ್ರೆಸ್​ ಹುನ್ನಾರ ಮಾಡಿದೆ. ಸಿದ್ದರಾಮಯ್ಯರನ್ನು ಹೇಗೆ ಮುಗಿಸಿದ್ದಾರೆ ಅಂತ ಗೊತ್ತಿಲ್ಲವಾ? ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಗಿಸಿದ್ರು. ಈಗ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಏನು ಹುನ್ನಾರ ಮಾಡಿದ್ದಾರೆಂಬುದು ಗೊತ್ತಿದೆ ಎಂದು ಲೇವಡಿ ಮಾಡಿದರು.

ಲಿಂಗಾಯತ ಡ್ಯಾಂ ನೀರು ಕಾಂಗ್ರೆಸ್ ನತ್ತ ಬರುತ್ತಿದೆ ಎಂಬ ಡಿ.ಕೆ ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ,  ಕಾಂಗ್ರೆಸ್  ಡ್ಯಾಂನಲ್ಲೇ ನೀರೇ ಇಲ್ಲ. ಮೊದಲು ಅದನ್ನ ನೋಡಿಕೊಳ್ಳಲಿ . 2013ರಲ್ಲಿ ಲಿಂಗಾಯತ ಸಮುದಾಯ ವಿಭಜನೆ ಆಗಿಲ್ಲ ಲಿಂಗಾಯತ ಮತದಾರರು ಪ್ರಬುದ್ಧರಾಗಿದ್ದಾರೆ ಡಿಕೆ ಶಿವಕುಮಾರ್ ಹೇಳಿಕೆ ಬಳಿಕ ಲಿಂಗಾಯತರು ಮತ್ತಷ್ಟು ಜಾಗೃತರಾಗಿದ್ದಾರೆ. ಲಿಂಗಾಯತರನ್ನ ಗಟ್ಟಿ ಮಾಡುವ ಕೆಲಸ ಡಿಕೆ ಶಿವಕುಮಾರ್ ಮಾಡುತ್ತಿದ್ದಾರೆ ಎಂದರು.ವರುಣಾದಲ್ಲಿ ಸಿದ್ಧರಾಮಯ್ಯ ಮುಗಿಸಲು ಕಾಂಗ್ರೆಸ್ ಹುನ್ನಾರ cm bommai cm bommai 6

ಸಿಎಂ ಕಚೇರಿಯಿಂದ ಅಧಿಕಾರ ದುರ್ಬಳಕ್ಕೆ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ,  ಕಾಂಗ್ರೆಸ್ ನವರಿಗೆ ಮಾಡಲು  ಬೇರೆ ಕೆಲಸ ಇಲ್ಲದೇ ಆರೋಪ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ನಾಮಪತ್ರ ತಿರಸ್ಕೃತ ಏನಾದ್ರೂ ಆಯ್ತ…? ಕಾಂಗ್ರೆಸ್ ನಾಮಪತ್ರದಲ್ಲಿ ನಾವು ಭಾಗಿಯಾಗಿಲ್ಲ ಎಂದರು.

Key words: Congress –finish-Siddaramaiah – Varuna-CM Basavaraja Bommai