ಸರ್ಕಾರದಿಂದ ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್

ನವದೆಹಲಿ,ಏಪ್ರಿಲ್,25,2023(www.justkannada.in):  ಮುಸ್ಲಿಮರ 2ಬಿ ಮೀಸಲಾತಿ ರದ್ದು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಇದೀಗ ತಡೆಯಾಜ್ಞೆ ನೀಡಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಕೆಎಂ ಜೋಸೆಫ್ ಅವರ ನೇತೃತ್ವದ ಪೀಠ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರ ಮುಸ್ಲಿಮರಿಗಿದ್ದ  2ಬಿ ಶೇ.4ರಷ್ಟು ಮೀಸಲಾತಿ ರದ್ದುಗೊಳಿಸಿ ಇದನ್ನ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ಹೊಸ ಕ್ಯಾಟಗರಿ ಸೃಷ್ಟಿಸಿ ಎರಡು ಸಮುದಾಯಕ್ಕೆ ತಲಾ ಶೇ.2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು.

ರಾಜ್ಯ ಸರ್ಕಾರದ ಈ ನಿರ್ಧಾರವನ್ನ ಖಂಡಿಸಿ ಮುಸ್ಲಿಮ್ ಸಮುದಾಯದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಕುರಿತು ಆದೇಶಕ್ಕೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ಮೆಟ್ಟಿಲೇರಲಾಗಿತ್ತು. ಇದೀಗ ರಾಜ್ಯ ಸರ್ಕಾರದ ಈ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

Key words: Supreme Court -stayed -government’s- order – cancel- 2B reservation – Muslims